ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಮಳಿಗೆ ತೆರವುಗೊಳಿಸಿ: ಹೈಕೋರ್ಟ್‌

Last Updated 14 ಸೆಪ್ಟೆಂಬರ್ 2021, 19:54 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಆರ್. ಮಾರುಕಟ್ಟೆ ಪಾದಚಾರಿ ಮಾರ್ಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಳಿಗೆ ತೆರವು ಮತ್ತು ಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಮಳಿಗೆಯ ಪರವಾನಗಿ ನವೀಕರಣ ಕಾರ್ಯವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕೆ.ಆರ್. ಮಾರುಕಟ್ಟೆ ಸಂಕೀರ್ಣದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಳಿಗೆಗಳನ್ನು ತೆರವುಗೊಳಿಸಲು ಪಾಲಿಕೆಗೆ ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರು ಹೂವು ವ್ಯಾಪಾರಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

‍‍‍ಪ್ರಮಾಣ ಪತ್ರ ಸಲ್ಲಿಸಿದ ಬಿಬಿಎಂಪಿ, ‘ಕೆ.ಆರ್. ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗಾಗಿ ಮೀಸಲಿಟ್ಟದ್ದ ಜಾಗದಲ್ಲಿ ಅನಧಿಕೃತ 24 ಮಳಿಗೆಗಳು ನಿರ್ಮಾಣವಾಗಿದ್ದು, ತೆರವು ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 1,266 ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾರುಕಟ್ಟೆ
ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT