ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಅಂಡರ್ ಪಾಸ್ ನಿರ್ಮಾಣ: ವಾಹನ ಸಂಚಾರ ನಿರ್ಬಂಧ

Published 9 ಜುಲೈ 2024, 4:17 IST
Last Updated 9 ಜುಲೈ 2024, 4:17 IST
ಅಕ್ಷರ ಗಾತ್ರ

ಬೆಂಗಳೂರು: ವೈಟ್‌ಫೀಲ್ಡ್‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ರೈಲ್ವೆ ಬ್ರಿಡ್ಜ್‌ ಬಳಿ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 9 ರಿಂದ 12ರವರೆಗೆ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.  

ಪರ್ಯಾಯ ಮಾರ್ಗ: ಪಣತ್ತೂರು ದಿಣ್ಣೆ ಕಡೆಯಿಂದ ಪಣತ್ತೂರು ಮತ್ತು ಕುಂದಲಹಳ್ಳಿ ಕಡೆಗೆ ಹೋಗುವ ಸವಾರರು ಗುಂಜೂರು ಪಾಳ್ಯ ರಸ್ತೆಯಿಂದ ಸಿಲ್ವರ್ ಓಕ್ ರಸ್ತೆ ಮೂಲಕ ಬಳಗೆರೆ ಮುಖ್ಯರಸ್ತೆ ಬಳಸಿ ಪಣತ್ತೂರು ಮತ್ತು ಕುಂದಲಹಳ್ಳಿ ಕಡೆಗೆ ಸಂಚರಿಸಬಹುದು.
ಪಣತ್ತೂರು ಕಡೆಯಿಂದ ಪಣತ್ತೂರು ದಿಣ್ಣೆ ಕಡೆಗೆ ಹೋಗುವ ವಾಹನಗಳು ಬಳಗೆರೆ ಮುಖ್ಯರಸ್ತೆಯಿಂದ ಸಿಲ್ವರ್ ಓಕ್‌ ಮೂಲಕ ಗುಂಜೂರು ಪಾಳ್ಯ ರಸ್ತೆ ಬಳಸಿ ಪಣತ್ತೂರು ದಿಣ್ಣೆ ಕಡೆಗೆ ಸಾಗಬೇಕು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT