ಬೆಂಗಳೂರು: ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್ಐ) ಸುದ್ದಿ ವಾಹಿನಿಯ ಬೆಂಗಳೂರಿನ ಕಟ್ಟಡದ ಗುತ್ತಿಗೆ ನವೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ಆದೇಶಿಸಿದೆ.

ಬಿಬಿಎಂಪಿ ಕ್ರಮ ಪ್ರಶ್ನಿಸಿ ಯುಎನ್‌ಐ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಅರ್ಜಿ ಇತ್ಯರ್ಥವಾಗುವ ವರೆಗೆ ಕಟ್ಟಡವನ್ನು ಯಾರಿಗೂ ಗುತ್ತಿಗೆ ನೀಡದಂತೆ ಹಾಗೂ ಯಾವುದೇ ನವೀಕರಣ ಕಾಮಗಾರಿ ನಡೆಸದಂತೆ ಬುಧವಾರ ನಿರ್ದೇಶನ ನೀಡಿದೆ.

ಯುಎನ್ಐ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ‘ಅರ್ಜಿದಾರರು ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಟ್ಟಡದ ಗುತ್ತಿಗೆ ನವೀಕರಿಸುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರೂ, ಅದನ್ನು ಪರಿಗಣಿಸದೆ ಕಟ್ಟಡ ವಶಪಡಿಸಿಕೊಳ್ಳಲಾಗಿದೆ’ ಎಂಬ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.