ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ (ಮಾರ್ಚ್ 26) ನಗರಕ್ಕೆ ಭೇಟಿ ನೀಡಲಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.
‘ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8 ಗಂಟೆವರೆಗಿನ ಅವಧಿಯಲ್ಲಿ ಬಳ್ಳಾರಿ ರಸ್ತೆ, ಹೆಬ್ಬಾಳ ವೃತ್ತ, ಮೇಖ್ರಿ ವೃತ್ತ, ಕಾವೇರಿ ಚಿತ್ರಮಂದಿರ ವೃತ್ತ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್. ವೃತ್ತ, ಹಡ್ಸನ್ ವೃತ್ತ, ಎನ್.ಆರ್. ವೃತ್ತ, ಪುರಭವನ ಎದುರು, ಹಳೇ ಏರ್‌ಪೋರ್ಟ್ ರಸ್ತೆ, ಎಎಸ್‌ಸಿ ಕೇಂದ್ರ ಹಾಗೂ ಇಸ್ರೊ ಜಂಕ್ಷನ್ ರಸ್ತೆಯಲ್ಲಿ ಅಮಿತ್ ಶಾ ಸಂಚರಿಸಲಿದ್ದಾರೆ.’
‘ಸಚಿವರು ಹಾದು ಹೋಗುವ ಸಂದರ್ಭದಲ್ಲಿ ಪ್ರಮುಖ ರಸ್ತೆ ಹಾಗೂ ಕೆಲ ಒಳರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಸಂಚಾರ ತಡೆಯಲಾಗುವುದು. ಹೀಗಾಗಿ, ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸಬೇಕು’ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.