ಸೋಮವಾರ, ಸೆಪ್ಟೆಂಬರ್ 20, 2021
21 °C

ನೂತನ ಶಿಕ್ಷಣ ನೀತಿಯಿಂದ ಆವಿಷ್ಕಾರ ಸಾಕಾರ: ಡಿ.ವಿ. ಸದಾನಂದ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ  ಸಂಶೋಧನೆ, ಆವಿಷ್ಕಾರಗಳು ಸಾಕಾರ ವಾಗಲಿದೆ’ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದರು. 

ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗಣಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಹಾಗೂ ಸಂವಹನ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ನವೀನ ಆವಿಷ್ಕಾರಗಳ ಪರಾಮರ್ಶೆ–2020 (ಎರಿಕ್ಸಾ–2020)’ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿದರು. 

‘ಹೆಚ್ಚಿನ ವಿದ್ಯಾರ್ಥಿಗಳು ವಿಷಯ ಗಳನ್ನು ಬಾಯಿಪಾಠ ಮಾಡಿ, ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಸೃಜನ ಶೀಲತೆ ಬೆಳೆಯುವುದಿಲ್ಲ.  ಕೃತಕಬುದ್ಧಿಮತ್ತೆ, ರೊಬೊಟ್‌ ಸೇರಿ ದಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು, ಆವಿಷ್ಕಾರಗಳನ್ನು ಕೈಗೊಳ್ಳಬೇಕು. ಅದರ ಫಲಿತಾಂಶಗಳು ಜನಸಾಮಾನ್ಯರಿಗೆ ಸಹಾಯಕವಾಗ
ಬೇಕು’ ಎಂದು ಸಲಹೆ ನೀಡಿರು. 

‌ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್.ಆರ್. ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು