ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ರಿಜಿಸ್ಟ್ರಾರ್ ನೇಮಕ ರದ್ದು ಕೋರಿದ ಅರ್ಜಿ ವಜಾ 

Last Updated 20 ಡಿಸೆಂಬರ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹುದ್ದೆಗೆ ಪ್ರೊ. ಕೊಟ್ರೇಶ್ ಅವರನ್ನು ನೇಮಕ ಮಾಡಿದ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನಾಗಿ ಪರಿಗಣಿಸಲಾಗದು’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT