ಮೊದಲ ಹಂತದಲ್ಲಿ ಮೂರು ಜಿಲ್ಲೆಗಳಲ್ಲಿ ಜಾರಿ

7
ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆ

ಮೊದಲ ಹಂತದಲ್ಲಿ ಮೂರು ಜಿಲ್ಲೆಗಳಲ್ಲಿ ಜಾರಿ

Published:
Updated:

ಬೆಂಗಳೂರು: ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ ಯೋಜನೆಯನ್ನು (ಯುಪಿಓಆರ್) ರಾಜ್ಯದೆಲ್ಲೆಡೆ ಕ್ಷಿಪ್ರಗತಿಯಲ್ಲಿ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

‘ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆ ಅನುಷ್ಠಾನ ಗೊಳಿಸುತ್ತಿರುವ ಯೋಜನೆಗೆ ಮೈಸೂರು, ಶಿವಮೊಗ್ಗ ಮತ್ತು ಮಂಗಳೂರು ನಗರಗಳು ಆಯ್ಕೆಯಾಗಿವೆ. ನಗರಗಳ ಆಸ್ತಿಯನ್ನೂ ಅಳತೆ ಮಾಡಿ, ಅವುಗಳ ನಕ್ಷೆ ತಯಾರಿಸಲಾಗುತ್ತದೆ’ ಎಂದಿದ್ದಾರೆ. 

‘ಸಾರ್ವಜನಿಕರು ಮತ್ತು ವಿವಿಧ ಇಲಾಖೆಗಳಿಂದ ಆಸ್ತಿ ದಾಖಲೆ ಸಂಗ್ರಹಿಸಿ, ಪರಿಶೀಲಿಸಲಾಗುತ್ತದೆ. ಬಳಿಕ ಹಕ್ಕು ವಿಚಾರಣಾ ಪ್ರಕ್ರಿಯೆ ಆರಂಭಿಸಿ, ಪಿಆರ್ ಕಾರ್ಡುಗಳನ್ನು (ಪ್ರಾಪರ್ಟಿ ರೆಕಾರ್ಡ್ ಕಾರ್ಡ್) ಮಾಲೀಕರಿಗೆ ವಿತರಿಸಲಾಗುತ್ತದೆ. ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯ’ ಎಂದಿದ್ದಾರೆ.

‘ಶಿವಮೊಗ್ಗದಲ್ಲಿ ಪಿಆರ್ ಕಾರ್ಡುಗಳನ್ನು ವಿತರಿಸಲಾಗಿದೆ. ಮಂಗಳೂರಿನಲ್ಲಿ ಇದನ್ನು ಕಡ್ಡಾಯ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಮೈಸೂರಿನಲ್ಲಿ ಇದೇ ಕ್ರಮ ಜಾರಿಗೆ ಬರಲಿದೆ’ ಎಂದಿದ್ದಾರೆ. ಈ ಯೋಜನೆಯನ್ನು ಬೆಂಗಳೂರಿನ 50 ವಾರ್ಡುಗಳಲ್ಲಿ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಒಂದು ವಾರ್ಡಿನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !