ಭಾನುವಾರ, ನವೆಂಬರ್ 29, 2020
20 °C

ಜೂಜಾಟದಲ್ಲಿ ಭಾಗಿ; ಕಾನ್‌ಸ್ಟೆಬಲ್‌ಗಳ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೂಜಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಉಪ್ಪಾರಪೇಟೆಯ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಾನ್‌ಸ್ಟೆಬಲ್‌ಗಳಾದ ಮಲ್ಲೇಶ್ ಹಾಗೂ ಗವಿಸಿದ್ದೇಶ್ ಭಾಗಿಯಾಗಿದ್ದ ಬಗ್ಗೆ ತನಿಖಾಧಿಕಾರಿ ವರದಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

‘ಇನ್‌ಸ್ಪೆಕ್ಟರ್ ಆರ್.ಎಸ್.ಚೌಧರಿ ನೇತೃತ್ವದ ತಂಡ, ಜೆ.ಪಿ. ನಗರದ ಹೋಟೆಲ್‌ವೊಂದರ ಮೇಲೆ ಅಕ್ಟೋಬರ್ 19ರಂದು ದಾಳಿ ಮಾಡಿತ್ತು. ಮಲ್ಲೇಶ್ ಹಾಗೂ ಗವಿಸಿದ್ದಪ್ಪ ಸಹ ಜೂಜಾಟದಲ್ಲಿ ನಿರತರಾಗಿದ್ದರು. ಅವರಿಬ್ಬರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು