ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಕ್ಷೇತ್ರ: ಮತದಾನ ಪ್ರಮಾಣ ಏರಿಕೆ

Last Updated 28 ಅಕ್ಟೋಬರ್ 2020, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನ ಶಾಂತಿಯುತವಾಗಿ ನಡೆದಿದ್ದು, ಶೇ 66.20ರಷ್ಟು ಮತದಾನವಾಗಿದೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಅತ್ಯಂತ ಕಡಿಮೆ ಅಂದರೆ ಶೇ 44.91 ರಷ್ಟು ಮತದಾನವಾಗಿತ್ತು. ಈ ಬಾರಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಈ ಕ್ಷೇತ್ರದ ವ್ಯಾಪ್ತಿಗೆ ಬರುವ ದೊಡ್ಡಬಳ್ಳಾಪುರದ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಒಳಗೆ ಬಿಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಕರ ಕ್ಷೇತ್ರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳನ್ನು ಒಳಗೊಂಡಿದೆ. ಗ್ರಾಮಾಂತರ ಜಿಲ್ಲೆಯಲ್ಲಿ ಶೇ 90 ರಷ್ಟು ಮತದಾನವಾಗಿದೆ. 2,268 ಮತದಾರರ ಪೈಕಿ 2031 ಮತದಾರರು ಮತ ಚಲಾಯಿಸಿದ್ದಾರೆ. ಎಲ್ಲ ಮತಗಟ್ಟೆಗಳಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು.

ಕ್ಷೇತ್ರದಲ್ಲಿ ಬಿಜೆಪಿಯ ಪುಟ್ಟಣ್ಣ, ಕಾಂಗ್ರೆಸ್‌ನಿಂದ ಪ್ರವೀಣ್‌ ಪೀಟರ್‌ ಮತ್ತು ಜೆಡಿಎಸ್‌ನಿಂದ ಎ.ಪಿ.ರಂಗನಾಥ್‌ ಅವರು ಕಣದಲ್ಲಿದ್ದಾರೆ. ನ.2 ರಂದು ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT