ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಸಂತೋಷ್ (29) ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ತಂದೆ ಗುರುರಾಜ್ (58) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ಕೆಎಚ್ಬಿ ಕಾಲೊನಿಯಲ್ಲಿ ಸೋಮವಾರ ಮಧ್ಯಾಹ್ನ ಕೊಲೆ ನಡೆದಿದೆ. ಸಂಬಂಧಿಕರು ನೀಡಿದ್ದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತೋಷ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಗುರುರಾಜ್, ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದ. ಮಗ ಸಂತೋಷ್ ಸಹ ಅದಕ್ಕೆ ಸಹಕಾರ ನೀಡುತ್ತಿದ್ದರು.’ ಎಂದೂ ತಿಳಿಸಿದರು.

ಚಾಕುವಿನಿಂದ ಎದೆಗೆ ಚುಚ್ಚಿದ: ‘ಸೋಮವಾರ ಮಧ್ಯಾಹ್ನವೇ ಮದ್ಯ ಕುಡಿದಿದ್ದ ಗುರುರಾಜ್, ಮನೆಗೆ ಬಂದು ಜಗಳ ತೆಗೆದಿದ್ದ. ಊಟ ಮಾಡುತ್ತಿದ್ದ ಸಂತೋಷ್, ತಂದೆಯ ವರ್ತನೆಯನ್ನು ಪ್ರಶ್ನಿಸಿದ್ದ. ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು’.

‘ಸಿಟ್ಟಾಗಿದ್ದ ಗುರುರಾಜ್, ಚಾಕುವಿನಿಂದ ಮಗನ ಎದೆಗೆ ಚುಚ್ಚಿದ್ದ. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಸಂತೋಷ್ ಅವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ’ ಎಂದೂ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.