ಮಂಗಳವಾರ, ಅಕ್ಟೋಬರ್ 19, 2021
24 °C

ಯುಪಿಎಸ್‌ಸಿ: ತರಬೇತಿ ಕೇಂದ್ರಗಳಿಗೆ ಉತ್ತಮ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ 2020ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯಲ್ಲಿ ನಗರದ ವಿವಿಧ ತರಬೇತಿ ಕೇಂದ್ರಗಳ ಅಭ್ಯರ್ಥಿಗಳು ಯಶಸ್ವಿಯಾಗಿದ್ದಾರೆ.

ಚಂದ್ರಾ ಲೇಔಟ್‌ನಲ್ಲಿರುವ ‘ಇಂಡಿಯಾ 4 ಐಎಎಸ್‌’ಯಿಂದ ತರಬೇತಿ ಪಡೆದ ರಾಜ್ಯದ 24 ಅಭ್ಯರ್ಥಿಗಳು ಯಶಸ್ವಿಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇಲ್ಲಿನ ವಿಜಯನಗರದ ‘ಯುನಿವರ್ಸಲ್‌ ಕೋಚಿಂಗ್‌ ಸೆಂಟರ್‌’ನಲ್ಲಿ ತರಬೇತಿ ಪಡೆದ 22 ಅಭ್ಯರ್ಥಿಗಳು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರದ ಆರ್‌. ಉಪೇಂದ್ರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ. ರಾಜಕುಮಾರ ಅಕಾಡೆಮಿಯಲ್ಲಿ ತರಬೇತಿ ಪಡೆದ ಒಂಬತ್ತು ಅಭ್ಯರ್ಥಿಗಳು ಯಶಸ್ವಿಯಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು