ಬೆಂಗಳೂರು: ‘ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಇನ್ಸೈಟ್ಸ್ ಐಎಎಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 180ಕ್ಕೂ ಹೆಚ್ಚು ಅಭ್ಯರ್ಥಿಗಳು ರ್ಯಾಂಕ್ ಪಡೆದಿದ್ದು, ದೇಶದ ವಿವಿಧ ಭಾಗದವರು ಈ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಮೂಲಕ ಯಶಸ್ಸು ಸಾಧಿಸಿದ್ದಾರೆ’ ಎಂದು ಇನ್ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಜಿ.ಬಿ. ಹೇಳಿದ್ದಾರೆ.

‘ಈ ಪೈಕಿ ಅಖಿಲ ಭಾರತ ಮಟ್ಟದಲ್ಲಿ 15ನೇ ರ್ಯಾಂಕ್, 19ನೇ ರ್ಯಾಂಕ್ ಸೇರಿದಂತೆ ಅನೇಕ ಉನ್ನತ ಶ್ರೇಣಿಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದಿದ್ದಾರೆ. ಕರ್ನಾಟಕದ ಅಭ್ಯರ್ಥಿಗಳ ಸಾಧನೆಯೂ ಗಮನಾರ್ಹವಾಗಿದೆ. ನಮ್ಮ ಸಂಸ್ಥೆಯ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆಗಳ ಪರೀಕ್ಷಾ ಸರಣಿ, ಮೆಂಟರ್ಶಿಪ್ ಕಾರ್ಯಕ್ರಮ, ಕೋರ್ ಬ್ಯಾಚ್ ಮತ್ತು ಅಣಕು ಸಂದರ್ಶನಗಳಂತಹ ಮಾರ್ಗದರ್ಶನ ಕಾರ್ಯ ಕ್ರಮ ಗಳಲ್ಲಿ ಪಾಲ್ಗೊಂಡಿದ್ದ, ರಾಜ್ಯದ 23 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ’ ಎಂದು ಶ್ಲಾಘಿಸಿದರು.

‘ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದವರು ಯುಪಿಎಸ್ಸಿಯಲ್ಲಿ ರ್ಯಾಂಕ್ ಪಡೆಯುತ್ತಿರುವ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ‘ಮಿಷನ್ 100’ ಕಾರ್ಯಕ್ರಮದಡಿ 2028ರ ವೇಳೆಗೆ ಕರ್ನಾಟಕದಿಂದ ಪ್ರತಿ ವರ್ಷ ಕನಿಷ್ಠ 100 ಅಭ್ಯರ್ಥಿಗಳನ್ನು ಐಎಎಸ್, ಐಪಿಎಸ್ಗೆ ಕೊಡುಗೆ ನೀಡುವ ಗುರಿ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.