ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಎಸ್‌ಆರ್‌ಟಿಸಿ ಅಧ್ಯಯನ, ಯು.ಪಿ. ನಿಯೋಗ ಭೇಟಿ

ಲೋಗೊ, ಟ್ಯಾಗ್‌ಲೈನ್‌, ಗ್ರಾಫಿಕ್ಸ್‌ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಧ್ಯಯನ ತಂಡ
Published 26 ಮೇ 2024, 0:25 IST
Last Updated 26 ಮೇ 2024, 0:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಿರ್ವಹಣೆ ಕುರಿತು ಅಧ್ಯಯನ ಮಾಡಲು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿಯೋಗವು ಭೇಟಿ ನೀಡಿದೆ.

ನಿಯೋಗವು ಎರಡು ದಿನ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ನಿಲ್ದಾಣ, ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿ ನಿಯಂತ್ರಣ ಕೊಠಡಿಯ ಕಾರ್ಯನಿರ್ವಹಣೆ ಹಾಗೂ ಬಸ್ಸುಗಳ ಕಾರ್ಯಾಚರಣೆ ಪರಿಶೀಲಿಸಿತು. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಇ.ವಿ. ಪವರ್‌ ಚಾರ್ಜಿಂಗ್‌ ಕೇಂದ್ರ, ವಿದ್ಯುತ್‌ ಚಾಲಿತ ವಾಹನಗಳ ಚಾರ್ಜಿಂಗ್ ಹಾಗೂ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿಯನ್ನು ಪಡೆದರು.

ವಾಹನಗಳ ತಾಂತ್ರಿಕ ನಿರ್ವಹಣೆ ಮತ್ತು ಕಾರ್ಯಾಚರಣೆ, ಡ್ಯೂಟಿ ರೋಟಾ ವ್ಯವಸ್ಥೆ, ಮುಂಗಡ ಆಸನ ಕಾಯ್ದಿರಿಸುವಿಕೆ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಕ್ರಮಗಳು, ಮಾಹಿತಿ ತಂತ್ರಜ್ಞಾನ ಉಪಕ್ರಮಗಳು, ಬಸ್ ನಿಲ್ದಾಣ/ ಘಟಕಗಳ ಕಾಮಗಾರಿ ಪದ್ಧತಿ ಕುರಿತು ಕೆಎಸ್‌ಆರ್‌ಟಿಸಿ ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತೆ) ನಂದಿನಿದೇವಿ ಮಾಹಿತಿ ನೀಡಿದರು.

ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ್ದ ನಿಯೋಗವು ಐರಾವತ ಕ್ಲಬ್‌ ಕಾಸ್‌,
ಅಂಬಾರಿ ಡ್ರೀಮ್‌ ಕ್ಲಾಸ್‌, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್‌ ಹಾಗೂ ಅಶ್ವಮೇಧ ವಾಹನಗಳ ಬ್ರ್ಯಾಂಡಿಂಗ್‌ ಕಾರ್ಯವನ್ನು ಪರಿಶೀಲಿಸಿದರು. ನಿಗಮವು ಆಳವಡಿಸಿರುವ ಲೋಗೊ, ಟ್ಯಾಗ್‌ಲೈನ್‌ ಹಾಗೂ ಗ್ರಾಫಿಕ್ಸ್‌ಗಳ ಬಗ್ಗೆ ಮೆಚ್ಚುಗೆ
ವ್ಯಕ್ತಪಡಿಸಿದರು.

ಯುಪಿಎಸ್‌ಆರ್‌ಟಿಸಿ ಹೆಚ್ಚುವರಿ ವ್ಯವಸ್ಥಾಪಕಿ ಪ್ರಣತ ಐಶ್ವರ್ಯ, ಮುಖ್ಯ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ರಾಜೀವ್‌ ಆನಂದ, ಪ್ರಾದೇಶಿಕ ವ್ಯವಸ್ಥಾಪಕ ಕೇಶ್ರಿ ನಂದನ್‌ ಚೌದ್ರಿ, ವ್ಯವಸ್ಥಾಪಕ ಅನುರಾಗ್ ಯಾದವ್‌, ಕೆಎಸ್‌ಆರ್‌ಟಿಸಿ ಮುಖ್ಯ ತಾಂತ್ರಿಕ ಶಿಲ್ಪಿ ಎನ್.ಕೆ.ಬಸವರಾಜು, ಮುಖ್ಯ
ಸಂಚಾರ ವ್ಯವಸ್ಥಾಪಕ ಜೆ.ಅಂತೋನಿ ಜಾರ್ಜ್‌, ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷಣ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT