ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಮಕ್ಕಳ ಕಳ್ಳ ಸಾಗಣೆ, ಬಾಲ್ಯ ವಿವಾಹ, ಪೋಕ್ಸೊ ಪ್ರಕರಣಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಮಕ್ಕಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿಗಳನ್ನು ರಚಿಸಲಾಗುತ್ತದೆ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಕಾವಲು ಸಮಿತಿಗಳನ್ನು ಪ್ರಾರಂಭಿಸಲಾಗಿದೆ. ಈ ಸಮಿತಿಗಳು ಪೋಕ್ಸೊ, ಬಾಲಕಾರ್ಮಿಕ ಹಾಗೂ ಜೀತ ಪದ್ಧತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜಾಗೃತಿ ಮೂಡಿಸುತ್ತಿವೆ. ಅದೇ ಮಾದರಿಯಲ್ಲಿ ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲೂ ಕಾವಲು ಸಮಿತಿಗಳನ್ನು ರಚಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಮಹಿಳಾ ಸದಸ್ಯರು ಉಪಾಧ್ಯಕ್ಷರಾಗಿರುತ್ತಾರೆ. ನಗರ ಸ್ಥಳೀಯ ಸಂಸ್ಥೆಯ ಇಬ್ಬರು ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿ, ಸಬ್ ಇನ್ಸ್ಪೆಕ್ಟರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸ್ವಯಂ ಸೇವಾ ಸಂಸ್ಥೆಯ ಇಬ್ಬರು ಮಹಿಳಾ ಸದಸ್ಯರು, ಪ್ರೌಢಶಾಲಾ ವಿದ್ಯಾರ್ಥಿಗಳು, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆಯ ತಲಾ ಒಬ್ಬ ಅಧಿಕಾರಿ, ವಾರ್ಡ್ ಮಟ್ಟದ ಅಧಿಕಾರಿ, ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಸಮಿತಿಯ ಸದಸ್ಯರಾಗಿರುತ್ತಾರೆ.

ಸಮಿತಿಯಲ್ಲಿ ಶೇಕಡ 50ಕ್ಕಿಂತ ಹೆಚ್ಚು ಮಹಿಳಾ ಸದಸ್ಯರು ಇರಬೇಕು. ಮೂರು ತಿಂಗಳಿಗೊಮ್ಮೆ ಸಭೆ ಆಯೋಜಿಸಬೇಕು. ಕಳ್ಳ ಸಾಗಣೆಗೆ ಒಳಗಾದ ಮಕ್ಕಳ ಹಾಗೂ ಮಹಿಳೆಯರನ್ನು ರಕ್ಷಿಸುವ ಜೊತೆಗೆ ಅವರ ಕುಟುಂಬಗಳಿಗೆ ಆರ್ಥಿಕ, ನೈತಿಕ, ಸಾಮಾಜಿಕ, ವೈದ್ಯಕೀಯ ಹಾಗೂ ಶೈಕ್ಷಣಿಕ ಸಹಾಯ ಒದಗಿಸಬೇಕು. ಬಾಲ್ಯ ವಿವಾಹ, ಬಾಲ ಗರ್ಭಿಣಿ, ಬಾಲಭಿಕ್ಷಾಟನೆ, ಬಾಲಕಾರ್ಮಿಕ ಪದ್ಧತಿಯ ಕುರಿತು ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಈ ಸಮಿತಿಯ ಜವಾಬ್ದಾರಿಯಾಗಿದೆ.

‘ಕಾಣೆಯಾದ ಮಕ್ಕಳು ಹಾಗೂ ಮಹಿಳೆಯರ ದಾಖಲೆಗಳನ್ನು ಇಡಬೇಕು. ವಲಸೆ ಹೋದ ಕುಟುಂಬದ ಮಾಹಿತಿಯ ಜೊತೆಗೆ ಮೇಲ್ವಿಚಾರಣೆ ಮಾಡಬೇಕು. ಬಾಲ್ಯ ವಿವಾಹ ತಡೆಯಬೇಕು. ಬಾಲ್ಯ ವಿವಾಹ ನಡೆದರೆ ಎಫ್ಆರ್ಐ ದಾಖಲಿಸಬೇಕು. ಬೇಸಿಗೆ ರಜೆ ಮುಗಿದ ನಂತರ ಶಾಲೆಗೆ ದಾಖಲಾಗುವ ಮಕ್ಕಳ ಸಮೀಕ್ಷೆ ನಡೆಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಪೋಷಕರ ಮನವೊಲಿಸಿ, ಮತ್ತೆ ಶಾಲೆಗೆ ದಾಖಲಿಸಿಕೊಳ್ಳಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಢನಂಬಿಕೆಗಳಿಗೆ ಬಲಿಯಾಗದಂತೆ ಮಕ್ಕಳ ರಕ್ಷಣೆ ಮಕ್ಕಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಅರಿವು 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು

‘ಸಮಿತಿ ರಚಿಸುವ ಪ್ರಕ್ರಿಯೆಗೆ ಚಾಲನೆ ನೀಡಿ’

‘ನಗರ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಕಾವಲು ಸಮಿತಿಗಳನ್ನು ರಚಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಈ ಪ್ರಕ್ರಿಯೆಗೆ ಕೂಡಲೇ ಚಾಲನೆ ನೀಡಬೇಕು. ಮಹಿಳೆಯರು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಕೆಳ ಹಂತದ ಅಧಿಕಾರಿಗಳಿಗೆ ತರಬೇತಿ ನೀಡಬೇಕು’ ಎಂದು ಶಶಿಧರ ಕೋಸಂಬೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.