ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆ ವಹಿಸಲು ಬಿಬಿಎಂಪಿಗೆ ಸೂಚನೆ

ಬಿಬಿಎಂಪಿ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪತ್ರ
Last Updated 13 ಮಾರ್ಚ್ 2020, 22:35 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮುಂಗಾರು ಮಳೆ ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ.

ಮಳೆ ನೀರು ಮನೆಗಳಿಗೆ ನುಗ್ಗಿ, ಮರಗಳು ರಸ್ತೆಗೆ ಉರುಳಿ ಸಾರ್ವಜನಿಕರಿಗೆ ಈ ಹಿಂದೆ ಅನೇಕ ಬಾರಿ ತೊಂದರೆ ಉಂಟಾಗಿದೆ. ಮುಂದೆ ಈ ರೀತಿ ತೊಂದರೆಗಳು ಆಗದಂತೆ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

‘ವಿಪತ್ತು ನಿರ್ವಹಣಾ ಕೇಂದ್ರ ಸ್ಥಾಪನೆ ಮಾಡಿ ತರಬೇತಿ ಹೊಂದಿದ ಸಿಬ್ಬಂದಿ ನಿಯೋಜಿಸಬೇಕು. ಬಿದ್ದ ಮರಗಳನ್ನು ತುಂಡರಿಸಲು ವಿದ್ಯುತ್ ಚಾಲಿತ ಗರಗಸ, ಕೊಡಲಿ, ಹಗ್ಗ, ಏಣಿ, ಬ್ಯಾಟರಿ, ದೂರವಾಣಿ ಸೇರಿ ಇತರ ಸಾಮಾಗ್ರಿಗಳನ್ನು ವಿಪತ್ತು ನಿರ್ವಹಣಾ ಕೇಂದ್ರದಲ್ಲಿ ಸಂಗ್ರಹಿಸಬೇಕು. ಕೆರೆಗಳಿಗೆ ನೀರು ಸರಾಗವಾಗಿ ಹರಿದು ಹೋಗಲು ನೀರುಗಾಲುವೆಗಳನ್ನು ಸ್ವಚ್ಛಗೊಳಿಸಬೇಕು’ ಎಂದು ನಿರ್ದೇಶನ ನೀಡಿದೆ.

‘ಅಪಾಯ ಸಂಭವಿಸಬಹುದಾದ ಜಾಗಗಳನ್ನು ಗುರುತಿಸಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಬಿದ್ದ ಮರಗಳನ್ನು 20 ಗಂಟೆಗಳಲ್ಲಿ ತೆರವುಗೊಳಿಸಬೇಕು. ಪಾಲಕೆಯ ಅರಣ್ಯ ಸಿಬ್ಬಂದಿ ಸೆಪ್ಟೆಂಬರ್ ಅಂತ್ಯದವರೆಗೆ ನೇರವಾಗಿ ಮುಖ್ಯ ಎಂಜಿನಿಯರ್‌ಗಳಿಗೇ ವರದಿ ಮಾಡಿಕೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಕೈಗೊಂಡ ಕ್ರಮಗಳ ಬಗ್ಗೆ 15 ದಿನಗಳ ಒಳಗೆ ಮಾಹಿತಿ ನೀಡಬೇಕು’ ಎಂದು ಬಿಬಿಎಂಪಿ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT