ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಂದುವೇಳೆ ಯಾವುದಾದರೂ ಮರಣಪತ್ರದಲ್ಲಿ ಜನಸಾಮಾನ್ಯರ ಹೆಸರಿದ್ದರೆ, ಪೊಲೀಸರು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಆದರೆ ಬಿಜೆಪಿಯ ಸಚಿವರು ಅಥವಾ ಶಾಸಕರ ಹೆಸರಿದ್ದರೆ ಖುಲಾಸೆ ಮಾಡುತ್ತಾರೆ. ರಾಜ್ಯದಲ್ಲಿ ಜನಸಾಮಾನ್ಯರಿಗೆ ಒಂದು ಕಾನೂನು, ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆಯೇ? ಅರವಿಂದ ಲಿಂಬಾವಳಿ ಅವರಿಗೆ ಸಾಕ್ಷ್ಯ ನಾಶಕ್ಕೆ ಅವಕಾಶ ನೀಡದೇ, ಶೀಘ್ರವೇ ಬಂಧಿಸಬೇಕು. ಪ್ರದೀಪ್ ಸಾವಿನಲ್ಲಿ ಅರವಿಂದ ಲಿಂಬಾವಳಿ ಪಾತ್ರ ಏನೆಂಬುದು ಎಲ್ಲರಿಗೂ ತಿಳಿಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಪ್ರದೀಪ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.