ಭಾನುವಾರ, ಮೇ 22, 2022
29 °C

ಮೂತ್ರ ವಿಸರ್ಜನೆ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂತ್ರ ವಿಸರ್ಜನೆ ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಅರುಣ್‌ಕುಮಾರ್ (26) ಎಂಬುವರನ್ನು ಕೊಲೆ ಮಾಡಲಾಗಿದೆ.

‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅರುಣ್‌ಕುಮಾರ್, ಕೆಲಸಕ್ಕಾಗಿ ನಗರಕ್ಕೆ ಬಂದು ಉಲ್ಲಾಳ ಉಪನಗರದಲ್ಲಿ ವಾಸವಿದ್ದರು. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮಂಗಳವಾರ ಸಂಜೆ 5.30ರ ಸುಮಾರಿಗೆ ಅರುಣ್‌ಕುಮಾರ್, ಉಲ್ಲಾಳು ಉಪನಗರದ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಸ್ಥಳದಲ್ಲಿದ್ದ ರೌಡಿ ಕೃಷ್ಣನ ಸಹಚರರು, ‘ಮಹಿಳೆಯರು ಓಡಾಡುವ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಿಯಲ್ಲ’ ಎಂದು ಪ್ರಶ್ನಿಸಿದ್ದರು. ನಂತರ, ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿತ್ತು.’

‘ಮತ್ತಷ್ಟು ಮಂದಿ ಸ್ಥಳದಲ್ಲಿ ಸೇರಿದ್ದರು. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತು. ರೌಡಿ ಕೃಷ್ಣ ಸಹಚರರು, ಅರುಣ್‌ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಅರುಣ್ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು