ಬೆಂಗಳೂರು: ಹೊಟ್ಟೆ ನೋವು ಮತ್ತು ಹೊಟ್ಟೆ ಉಬ್ಬರದ ಸಮಸ್ಯೆಯಿಂದ ಬಳಲುತ್ತಿದ್ದ 50 ವರ್ಷದ ಮಹಿಳೆಗೆ ಇಲ್ಲಿನ ವಾಣಿವಿಲಾಸ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಗರ್ಭಕೋಶದಲ್ಲಿ ಬೆಳೆದಿದ್ದ 7.4 ಕೆ.ಜಿ. ತೂಕದ ಗರ್ಭಾಶಯ ನಾರುಗಡ್ಡೆಯನ್ನು (ಫೈಬ್ರಾಯ್ಡ್) ಹೊರತೆಗೆದಿದ್ದಾರೆ.

ಮಹಿಳೆ ಇಬ್ಬರು ಮಕ್ಕಳ ತಾಯಿಯಾಗಿದ್ದು, ಆರು ತಿಂಗಳಿನಿಂದ ಈ ಸಮಸ್ಯೆ ಎದುರಿಸುತ್ತಿದ್ದರು. ಅಸ್ವಸ್ಥತೆ ದಿನೇ ದಿನೇ ಹೆಚ್ಚಾದ ಕಾರಣ ಚಿಕಿತ್ಸೆಗಾಗಿ ವಾಣಿವಿಲಾಸ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸ್ಕ್ಯಾನಿಂಗ್ ಹಾಗೂ ಪ್ರಯೋಗಾಲಯ ಪರೀಕ್ಷೆಯಿಂದ ಗರ್ಭಾಶಯದಲ್ಲಿ ಫೈಬ್ರಾಯ್ಡ್ ಇರುವುದು ದೃಢಪಟ್ಟಿತು. ಬಳಿಕ ವೈದ್ಯರು ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿದ್ದರು.

ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯಕೀಯ ಅಧೀಕ್ಷಕಿ ಡಾ.ಸಿ. ಸವಿತಾ ಮತ್ತು ಸ್ತ್ರೀರೋಗ ತಜ್ಞೆ ಡಾ. ತೇಜಸ್ವಿನಿ ಕೆ.ಕೆ. ನೇತೃತ್ವದ ವೈದ್ಯಕೀಯ ತಜ್ಞರ ತಂಡವು ಶಸ್ತ್ರಚಿಕಿತ್ಸೆಯನ್ನು ನಡೆಸಿ, 7.4 ಕೆ.ಜಿ. ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿದೆ. ಚಿಕಿತ್ಸೆ ನಂತರ ಮಹಿಳೆಯು ಚೇತರಿಸಿಕೊಂಡಿದ್ದು, ನೋವು ಮುಕ್ತರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

‘ಗರ್ಭಾಶಯವು 36 ವಾರಗಳ ಗರ್ಭಧಾರಣೆಯಷ್ಟು ದೊಡ್ಡದಾಗಿತ್ತು. ಆದ್ದರಿಂದ ಈ ಪ್ರಕರಣದಲ್ಲಿ ಶಸ್ತ್ರಚಿಕಿತ್ಸೆ ಸವಾಲಾಗಿತ್ತು. ಮಹಿಳೆಯರಲ್ಲಿ ನಿಯಮಿತ ಆರೋಗ್ಯ ತಪಾಸಣೆಯ ಪ್ರಾಮುಖ್ಯತೆಯನ್ನು ಈ ಪ್ರಕರಣ ತಿಳಿಸುತ್ತದೆ. ಯಾವುದೇ ರೋಗ ಲಕ್ಷಣವನ್ನು ನಿರ್ಲಕ್ಷಿಸದೆ, ತಪಾಸಣೆ ಮಾಡಿಸಿಕೊಳ್ಳುವುದು ಸೂಕ್ತ. ಸಮಸ್ಯೆಯನ್ನು ಆರಂಭದಲ್ಲೆ ಪತ್ತೆ ಹಚ್ಚಿದರೆ ಚಿಕಿತ್ಸೆ ಸುಲಭ ಸಾಧ್ಯ’ ಎಂದು ಡಾ.ಸಿ. ಸವಿತಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.