ಮಂಗಳವಾರ, ಸೆಪ್ಟೆಂಬರ್ 21, 2021
26 °C

‘ಧಮ್‌ ಇದ್ದರೆ ರಾಜೀನಾಮೆ ಪಡೆಯಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ಹೈಕಮಾಂಡ್‌ಗೆ ಧಮ್ ಮತ್ತು ತಾಕತ್ ಇದ್ದರೆ ಭೂ ಕಂಟಕದ ಆತಂಕ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಂದ ರಾಜೀನಾಮೆ ಪಡೆಯಲಿ’ ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌. ಉಗ್ರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಯಾವ ಮುಖ ಇಟ್ಟುಕೊಂಡು ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸುತ್ತಾರೆ. ಬದ್ಧತೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಪಡೆಯುತ್ತಿದ್ದರು’ ಎಂದರು.

‘ಯಡಿಯೂರಪ್ಪ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬೆಳ್ಳಂದೂರು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು. ಆದರೆ, 2019ರವರೆಗೆ ಯಾವುದೇ ಲೋಕಾಯುಕ್ತ ಅಧಿಕಾರಿ ಪ್ರಕರಣ ತನಿಖೆ ಮಾಡಿರಲಿಲ್ಲ. ಇದೀಗ ಹೈಕೋರ್ಟ್‌ನಿಂದ ತನಿಖೆಗೆ ಆದೇಶ ಬಂದಿದೆ. ಭ್ರಷ್ಟಾಚಾರ ತಡೆಯಲು ಇದು ಅತ್ಯುತ್ತಮ ಆದೇಶ’ ಎಂದೂ ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು