ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಾಧ್ಯಕ್ಷ ಸ್ಥಾನವನ್ನಾದರೂ ಕೊಡಲಿ- ವಿ.ಸೋಮಣ್ಣ

Published 12 ಆಗಸ್ಟ್ 2023, 18:14 IST
Last Updated 12 ಆಗಸ್ಟ್ 2023, 18:14 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದು ನಿಜ. ಅದು ಸಾಧ್ಯವಾಗದಿದ್ದರೆ ಕಾರ್ಯಾಧ್ಯಕ್ಷ ಸ್ಥಾನವನ್ನಾದರೂ ಕೊಡಲಿ’ ಎಂದು ಬಿಜೆಪಿ ಮುಖಂಡ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಮಾಡಿ ಒತ್ತಾಯಿಸಿದ್ದೇನೆ. ಅವರಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ’ ಎಂದರು.

‘ನನಗೆ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ನೀಡಿದರೆ ಮಜವೇ ಬೇರೆ ಇರುತ್ತದೆ. ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಾಧ್ಯಕ್ಷರನ್ನು ನೇಮಿಸುವ ಪದ್ಧತಿ ಇದೆ. ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡಲಾಗದಿದ್ದರೆ ಕಾಂಗ್ರೆಸ್‌ ಪಕ್ಷದ ಮಾದರಿಯಲ್ಲಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಿ’ ಎಂದರು.

‘ಸೋಮಣ್ಣ ಅವರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ’ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ‘40 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿದ್ದೇನೆ. ಸುಮ್ಮನೆ ಕೂರುವವನಲ್ಲ. ಸಮಯ ಬಂದಾಗ ನೋಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT