ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕುಪತ್ರ ನೋಂದಣಿ ಶುಲ್ಕ ಇಳಿಕೆ: ಸಚಿವ ವಿ.ಸೋಮಣ್ಣ

Last Updated 25 ಮಾರ್ಚ್ 2021, 2:18 IST
ಅಕ್ಷರ ಗಾತ್ರ

ಬೆಂಗಳೂರು: ‘ಕಳೆದ 40 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಡವರಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರ ಚಾಲನೆ ನೀಡಿದೆ. ಈ ಮೊದಲು ಸಾಮಾನ್ಯ ವರ್ಗದವರಿಗೆ ₹10 ಸಾವಿರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ₹4 ಸಾವಿರ ಹಕ್ಕುಪತ್ರ ನೋಂದಣಿ ಶುಲ್ಕ ವಿಧಿಸಲಾಗುತ್ತಿತ್ತು. ಇದನ್ನು ನಾವು ಕ್ರಮವಾಗಿ ₹4 ಹಾಗೂ ₹2 ಸಾವಿರಕ್ಕೆ ಇಳಿಸಿದ್ದೇವೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಬುಧವಾರ ಹೇಳಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ದಾಸರಹಳ್ಳಿ ಮತ್ತು ಡಾ.ರಾಜಕುಮಾರ್ ವಾರ್ಡ್‌ನ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಪ್ರಧಾನಿ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಮನೆ ಕಟ್ಟಲು ಬಿಡುಗಡೆಯಾಗಿರುವ ಚೆಕ್‌ಗಳನ್ನು ವಿತರಿಸಿ ಮಾತನಾಡಿದರು.

‘ಹಕ್ಕುಪತ್ರ ಪಡೆದವರು ಮನೆಗಳನ್ನು ಮಾರಾಟ ಮಾಡಬೇಡಿ. ಇದನ್ನು ಉಳಿಸಿಕೊಂಡು ನೆಮ್ಮದಿಯ ಜೀವನ ನಡೆಸಿ’ ಎಂದು ಕಿವಿಮಾತು ಹೇಳಿದರು.

‘ಬಡವರಿಗೆ ಶಾಶ್ವತ ಸೂರು ಕಲ್ಪಿಸಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಕನಸು. ಇದನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಮುಂದಾಗಿದೆ. ವಸತಿ ಇಲಾಖೆ ತ್ವರಿತಗತಿಯಲ್ಲಿ ವಸತಿ ನಿರ್ಮಿಸಿ ಅವುಗಳನ್ನು ಅರ್ಹರಿಗೆ ಹಂಚಿಕೆ ಮಾಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT