‘ವಲಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’
‘ಆರೋಗ್ಯ ವಿಭಾಗಕ್ಕೆ ತ್ಯಾಜ್ಯ ವಿಲೇವಾರಿ ನಿರ್ವಹಣೆ ಜವಾಬ್ದಾರಿ ಈಗಿಲ್ಲ. ನಿವೇಶನಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (ಬಿಎಸ್‌ಡಬ್ಲ್ಯುಎಂಎಲ್) ಕ್ರಮ ಕೈಗೊಳ್ಳಬೇಕು. ಮಾಲೀಕರಿಗೆ ಸ್ಥಳೀಯ ಎಂಜಿನಿಯರ್‌ಗಳು ನೋಟಿಸ್ ನೀಡಿ, ಅವರಿಂದ ದಂಡ, ತೆರವು ವೆಚ್ಚ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು. ವಲಯ ಆಯುಕ್ತರು ಕ್ರಮ ಕೈಗೊಳ್ಳಬೇಕು’ ಎಂದು ಬಿಬಿಎಂಪಿ ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ವಿಶೇಷ ಆಯುಕ್ತ ಸುರೊಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.