ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಮಕ್ಕಳಿಗೆ ಲಸಿಕಾ ಅಭಿಯಾನ

Published 5 ನವೆಂಬರ್ 2023, 16:09 IST
Last Updated 5 ನವೆಂಬರ್ 2023, 16:09 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆಯು 1ರಿಂದ 5ನೇ ತರಗತಿ ಹಾಗೂ 10ನೇ ತರಗತಿ ಮಕ್ಕಳಿಗೆ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಈ ತಿಂಗಳು ಲಸಿಕೆ ಅಭಿಯಾನ ಹಮ್ಮಿಕೊಂಡಿದೆ. 

ಗಂಟಲುಮಾರಿ (ಡಿಫ್ತೀರಿಯಾ) ಕಾಯಿಲೆಯ ಅಪಾಯದಿಂದ ರಕ್ಷಿಸಲು ಶಾಲಾ ಮಕ್ಕಳಿಗೆ ಅವರ ವಯಸ್ಸಿನ ಅನುಗುಣವಾಗಿ ಡಿ.ಪಿ.ಟಿ./ಟಿ.ಡಿ ಲಸಿಕೆಯನ್ನು ಆಯಾ ಪ್ರದೇಶಗಳ ಶಾಲೆಗಳಲ್ಲಿ ಶಿಬಿರ ಏರ್ಪಡಿಸಿ, ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ರೋಗದ ವಿರುದ್ಧ ಸಮರ ಸಾರಲು ಲಸಿಕೆ ಸಹಕಾರಿಯಾಗಿದೆ. ಆದ್ದರಿಂದ ಮಗು ಲಸಿಕೆ ಪಡೆದಿರುವ ಅಥವಾ ಪಡೆಯದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಇಲಾಖೆ ಹೇಳಿದೆ. 

16 ವರ್ಷದವರೆಗಿನ ಮಕ್ಕಳಿಗೆ ಮಾರಣಾಂತಿಕ ಕಾಯಿಲೆ ತಡೆಯಲು ವಿವಿಧ ಲಸಿಕೆಗಳನ್ನು ನೀಡಬೇಕಾಗುತ್ತದೆ. ಈ ಲಸಿಕೆಯನ್ನು ಕೆಲ ಪೋಷಕರು ಮರೆಯುತ್ತಾರೆ. ಹೀಗಾಗಿ, ಶಾಲೆಗಳಲ್ಲಿಯೇ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT