ಬೆಂಗಳೂರು: ಆನ್‌ಲೈನ್ ಕೋವಿಡ್ ಲಸಿಕೆ ನಂಬಿ ಹಣ ಕಳೆದುಕೊಂಡ

ಬೆಂಗಳೂರು: ಕೋವಿಡ್ ಲಸಿಕೆ ನೀಡುವುದಾಗಿ ಆನ್‌ಲೈನ್‌ನಲ್ಲಿ ಜಾಹೀರಾತು ನೀಡಿದ್ದ ವಂಚಕರು, ನಗರದ ನಿವಾಸಿಯೊಬ್ಬರಿಂದ ಹಣ ಪಡೆದು ವಂಚಿಸಿದ್ದಾರೆ.
ಬನಶಂಕರಿ 3ನೇ ಹಂತದ 33 ವರ್ಷದ ನಿವಾಸಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕೋವಿಡ್ ಲಸಿಕೆ ಎಲ್ಲಿ ಸಿಗುತ್ತದೆ? ಎಂದು ದೂರುದಾರ ಆನ್‌ಲೈನ್‌ನಲ್ಲಿ ಹುಡುಕಾಡಿದ್ದರು. ಇಂಡಿಯಾ ಮಾರ್ಟ್ ಜಾಲತಾಣದಲ್ಲಿ ಕೋವಿಡ್ ಲಸಿಕೆ ಬಗ್ಗೆ ಜಾಹೀರಾತು ನೋಡಿದ್ದರು. ಅದಾದ ಕೆಲ ನಿಮಿಷಗಳಲ್ಲಿ ದೂರುದಾರರಿಗೆ ಕರೆ ಮಾಡಿದ್ದ ವಂಚಕ, ‘ನಾವು ನಿಮಗೆ ಕೋವಿಡ್ ಲಸಿಕೆ ನೀಡುತ್ತೇವೆ’ ಎಂಬುದಾಗಿ ಹೇಳಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
’ಕೆಲ ಶುಲ್ಕ ಪಾವತಿ ಮಾಡಿದರೆ ಮನೆಗೆ ಬಂದು ಲಸಿಕೆ ಹಾಕುವುದಾಗಿಯೂ ವಂಚಕ ಹೇಳಿದ್ದ. ಅದನ್ನು ನಂಬಿದ್ದ ದೂರುದಾರ, ವಂಚಕ ಹೇಳಿದ್ದ ಬ್ಯಾಂಕ್ ಖಾತೆಗೆ ₹12,601 ಪಾವತಿ ಮಾಡಿದ್ದರು. ಅದಾದ ನಂತರ ವಂಚಕ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.