ಮಂಗಳವಾರ, ಜನವರಿ 28, 2020
25 °C

ವೈಕುಂಠ ಏಕಾದಶಿ: ನಾಳೆ ಎಲ್ಲೆಡೆ ಗೋವಿಂದ ಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈಂಕುಠ ಏಕಾದಶಿ ಪ್ರಯುಕ್ತ ನಗರದ ವೆಂಕಟೇಶ್ವರ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಹಾಗೂ ಉತ್ಸವಗಳು ನಡೆಯಲಿವೆ.

ಈ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗುತ್ತದೆ. ವೈಕುಂಠ ದ್ವಾರಗಳನ್ನು ನಿರ್ಮಿಸಿ, ದೇವರ ಮೂರ್ತಿಗಳಿಗೆ ಹೂವು ಹಾಗೂ ಆಭರಣಗಳಿಂದ ಸಿಂಗರಿಸಿ, ಲಡ್ಡು, ಪಾಯಸವನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ. 

ಇಸ್ಕಾನ್‌ ದೇವಸ್ಥಾನ, ‌ಶ್ರೀನಿವಾಸನಗರದ ಲಕ್ಷ್ಮೀ ವೆಂಕಟೇಶ್ವರ ದೇವಾಲಯ, ಮಹಾಲಕ್ಷ್ಮೀಪುರದ ಶ್ರೀನಿವಾಸ ದೇವಸ್ಥಾನ, ಕೋಟೆ ವೆಂಕಟೇಶ್ವರಸ್ವಾಮಿ, ಜೆ.ಪಿ.ನಗರ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಮಾಗಡಿ ರಸ್ತೆಯ ಎಂ.ಜಿ. ರೈಲ್ವೆ ಕಾಲೊನಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಕೆಂಗೇರಿಯ ಬೆಟ್ಟನಪಾಳ್ಯದ ಸ್ತಂಭದ ಲಕ್ಷ್ಮೀ ರಂಗನಾಥಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗುವುದು.

ದೇವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವೈಕುಂಠ ದ್ವಾರದ ಪೂಜೆ, ಅಷ್ಟೋತ್ತರ ಶತನಾಮಾವಳಿ ಸೇವೆ, ಮಂತ್ರ ಪುಷ್ಪ ಸೇವೆ, ಅಷ್ಟಾವಧಾನ ಸೇವೆಗಳನ್ನು ಮಾಡಲಾಗುತ್ತದೆ. ವೆಂಕಟರಮಣನ ಕುರಿತು ಕೀರ್ತನೆ, ದೇವರನಾಮ ಗಾಯನ ಕಾರ್ಯಕ್ರಮಗಳು ನಡೆಯಲಿವೆ.

ಪ್ರತಿಕ್ರಿಯಿಸಿ (+)