ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಾಲಿಕಾವಲ್ ಸೊಸೈಟಿ: ಯಥಾಸ್ಥಿತಿಗೆ ಆದೇಶ

Last Updated 7 ಫೆಬ್ರುವರಿ 2022, 16:23 IST
ಅಕ್ಷರ ಗಾತ್ರ

ಬೆಂಗಳೂರು: ವೈಯಾಲಿಕಾವಲ್ಸೊಸೈಟಿಯ55ನಿವೇಶನದಾರರಿಗೆ ನಾಗರಿಕ ಸೌಲಭ್ಯಕ್ಕೆ ಮೀಸಲಾದ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಯಥಾಸ್ಥಿತಿಕಾಯ್ದುಕೊಳ್ಳಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ನಿವೇಶನದಾರರಾದ ವಿ.ಆರ್.ಪದ್ಮಾವತಿ ಸೇರಿದಂತೆ 53 ಮಂದಿ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ.

‘ಖಾಲಿನಿವೇಶನದಲ್ಲಿಕಟ್ಟಡನಿರ್ಮಿಸದಂತೆಮತ್ತುಸದ್ಯಕ್ಕೆನಿರ್ಮಾಣವಾಗಿರುವ ಯಾವುದೇ ಕಟ್ಟಡವನ್ನುತೆರವುಗೊಳಿಸದಂತೆಯಥಾಸ್ಥಿತಿಕಾಯ್ದುಕೊಳ್ಳಬೇಕು‘ ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ವೈಯಾಲಿಕಾವಲ್ಸೊಸೈಟಿಗೆ ನ್ಯಾಯಪೀಠ ಆದೇಶಿಸಿದೆ.

‘ನಾಗರಿಕ ಸೌಲಭ್ಯಕ್ಕೆ ಮೀಸಲಾದ ನಿವೇಶನಗಳನ್ನು ಹಂಚಿಕೆ ಮಾಡಿದ್ದರೆ ಅಂತಹವುಗಳನ್ನು ತೆರವುಗೊಳಿಸಬೇಕು‘ ಎಂದುಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ನಿವೇಶನದಾರರು ಇದನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT