ಬೆಂಗಳೂರು: ಕುಟುಂಬ ನಿರ್ವಹಣೆಯ ಜೊತೆಗೆ ದೇಶದ ರಕ್ಷಣೆ ಮತ್ತು ಅಬಿವೃದ್ಧಿಯಲ್ಲಿ ಪ್ರಮುಖಪಾತ್ರ ವಹಿಸಬೇಕಾದ ಮಹತ್ತರ ಜವಾಬ್ದಾರಿ ಇಂದಿನ ಯುವಜನಾಂಗದ ಮೇಲಿದೆ ಎಂದು ಶಾಸಕ ಎ.ಸಿ.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಪುಲಿಕೇಶಿನಗರ ಕ್ಷೇತ್ರದ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ಎಸ್ಎಸ್-ಎನ್ಸಿಸಿ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಣದಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ತ್ಯಾಗ ಮತ್ತು ಸೇವಾ ಮನೋಭಾವನೆ ಮೂಡಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ನೀವು ಮೊದಲು ವಿದ್ಯಾವಂತರಾಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ಯಾರಾಲಿಂಪಿಕ್ಸ್ ಬೆಳ್ಳಿಪದಕ ವಿಜೇತ, ಎತ್ತರ ಜಿಗಿತದ ಸ್ಪರ್ಧಿ ಗಿರೀಶ.ಎಚ್.ಎನ್ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಿಷಯಗಳಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿ ಪ್ರಶಸ್ತಿ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

ಪಾಲಿಕೆ ಮಾಜಿ ಸದಸ್ಯೆ ನೇತ್ರಾ ನಾರಾಯಣ್, ಪ್ರಾಂಶುಪಾಲ ಡಾ.ಮಹ್ಮದ್ ಮಂಜೂರ್ ನೌಮಾನ್, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸೋಮಪ್ಪ ಬಡಿಗೇರ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಮಂಜುಶ್ರೀ ಎಂ, ಸಹಸಂಚಾಲಕಿ ಆಶಾ.ಎಚ್.ಆರ್, ಎನ್ಸಿಸಿ ಅಧಿಕಾರಿ ಗೀತಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.