ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ಜಯಂತಿ: ಜಿಲ್ಲೆಗೆ ₹ 1.50 ಲಕ್ಷ

Published 12 ಅಕ್ಟೋಬರ್ 2023, 15:40 IST
Last Updated 12 ಅಕ್ಟೋಬರ್ 2023, 15:40 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಆಚರಿಸಲು ತಲಾ ₹ 1.50 ಲಕ್ಷ, ತಾಲ್ಲೂಕು ಮಟ್ಟದಲ್ಲಿ ಆಚರಿಸಲು ತಲಾ ₹ 35 ಸಾವಿರ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಈ ಮೊತ್ತವನ್ನು ಆಯಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ಜಿಲ್ಲಾಮಟ್ಟದಲ್ಲಿ ಆಚರಿಸಲು ತಲಾ ₹ 1 ಲಕ್ಷ, ತಾಲ್ಲೂಕು ಮಟ್ಟದಲ್ಲಿ ಆಚರಿಸಲು ತಲಾ ₹ 25 ಸಾವಿರ ಬಿಡುಗಡೆ ಮಾಡಲಾಗುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT