ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಾಯಣದ ಕಲಿಕೆಗೆ ಅವಕಾಶ ಅಗತ್ಯ: ಡಾ.ಸಿ.ಎನ್‌. ಅಶ್ವತ್ಥ ನಾರಾಯಣ

Published 28 ಅಕ್ಟೋಬರ್ 2023, 16:13 IST
Last Updated 28 ಅಕ್ಟೋಬರ್ 2023, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಮಾಯಣ, ಮಹಾಭಾರತ, ಭಗವದ್ಗೀತೆಯಂತಹ ಮಹಾಕಾವ್ಯಗಳ ಕಲಿಕೆಗೆ ಶಾಲೆಗಳಲ್ಲಿ ಅವಕಾಶ ಇರಬೇಕು. ಈ ಮಹಾಕಾವ್ಯಗಳ ಕುರಿತು ಮಕ್ಕಳಲ್ಲಿ ಸಂಪೂರ್ಣ ಅರಿವು ಇರಬೇಕು’ ಎಂದು ಶಾಸಕ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಮಾಯಣವು ಮನುಷ್ಯನ ಸಾರ್ಥಕ ಜೀವನಕ್ಕೆ ಮಾರ್ಗದರ್ಶನ ನೀಡುತ್ತದೆ. ರಾಮಾಯಣವನ್ನು ಪ್ರಶ್ನಿಸುವ, ನಮ್ಮ ನಂಬಿಕೆಗಳನ್ನು ಅನುಮಾನಿಸುವಂತಹ ಕೃತ್ಯಗಳು ನಡೆಯುತ್ತಿವೆ. ನಮ್ಮ ಮಹಾಕಾವ್ಯಗಳ ಕಲಿಕೆಗೆ ಶಾಲೆಗಳಲ್ಲೂ ಅವಕಾಶ ನೀಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಸರ್ಕಾರದಿಂದ ನಡೆಸಲು ಬಿಜೆಪಿ ಆಡಳಿತದ ಅವಧಿಯಲ್ಲಿ ನಿರ್ಧರಿಸಲಾಗಿತ್ತು. ಆ ಮೂಲಕ ವಾಲ್ಮೀಕಿಯವರಿಗೆ ಗೌರವ ಸಲ್ಲಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು ಎಂದರು.

ಮಾಜಿ ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕಾರ್ಯದರ್ಶಿ ಜಗದೀಶ್ ಹಿರೇಮನಿ, ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪರಿಶಿಷ್ಟ ಪಂಗಡಗಳ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಓಲೇಕಾರ, ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ನಂಜುಂಡೇಗೌಡ, ಪ್ರಧಾನ ಕಾರ್ಯದರ್ಶಿ ಗುರುಲಿಂಗನ ಗೌಡ, ರಾಜ್ಯ ಕಟ್ಟಡ ಸಮಿತಿ ಸದಸ್ಯ ಎಂ. ನಾಗರಾಜ್, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಬಿ ನಾರಾಯಣಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT