ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾಜ ಮುನ್ನಡೆಸುವಲ್ಲಿ ಮಠಗಳ ಪಾತ್ರ ಮುಖ್ಯ’

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅಭಿಮತ
Last Updated 16 ಮಾರ್ಚ್ 2022, 16:29 IST
ಅಕ್ಷರ ಗಾತ್ರ

ಬೆಂಗಳೂರು:‘ಅನಾಥ ಮಕ್ಕಳನ್ನು ಪೋಷಿಸುವ ಜತೆಗೆ ಸಮಾಜ ಮುನ್ನಡೆಸುವಲ್ಲಿ ಮಠಗಳ ಪಾತ್ರ ಬಹುಮುಖ್ಯ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠ ನಗರದಲ್ಲಿ ಹಮ್ಮಿಕೊಂಡ ವೇದ ಸಂಸ್ಕೃತ ಪಾಠಶಾಲೆ ಕಟ್ಟಡದ ಉದ್ಘಾಟನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ‘ಈ ಸಮಾಜಕ್ಕೆ ದೊಡ್ಡ ಮಟ್ಟದ ಸೇವೆ ಸಲ್ಲಿಸುತ್ತಿರುವ ಮಠಗಳು ಯಾರ ಕಣ್ಣಿಗೂ ಅಷ್ಟಾಗಿ ಬೀಳುವುದಿಲ್ಲ. ಅನಾಥ ಮಕ್ಕಳ ಅಭಿವೃದ್ಧಿಯ ಜೊತೆಗೆ ಸಮಾಜವನ್ನು ಮುನ್ನಡೆಸುವಲ್ಲಿ ಮಠಗಳ ಪಾತ್ರ ಬಹುಮುಖ್ಯವಾದದ್ದು.ಸಮಾಜಕ್ಕೆ ದಿಕ್ಸೂಚಿಯಾಗಿ ಮಠಗಳು ಇರಬೇಕು. ಆ ಹಾದಿಯಲ್ಲಿ ವನಕಲ್ಲು ಮಠ ಸಾಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಕೆ. ಶ್ರೀನಿವಾಸ ಮೂರ್ತಿ, ‘ರೈತಾಪಿ ವರ್ಗದ ಎಲ್ಲ ಜಾತಿಯ ಅನಾಥ ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸುವ ದೊಡ್ಡ ಕಾರ್ಯವನ್ನು ವನಕಲ್ಲು ಮಠ ಮಾಡುತ್ತಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವ ಕೆಲಸವನ್ನೂ ಮಠ ಮಾಡುತ್ತಿದೆ’ ಎಂದು ಹೇಳಿದರು.

ಲೇಖಕ ಮಣ್ಣೆ ಮೋಹನ್ ಅವರ ‘ನಮ್ಮ ನಡುವಿನ ಸಾಧಕರು ಭಾಗ -2’ ಕೃತಿ ಬಿಡುಗಡೆ ಮಾಡಲಾಯಿತು.ಸಿದ್ದಗಂಗಾ ಮಠದ ಪೀಠಾಧ್ಯಕ್ಷ‌ ಸಿದ್ದಲಿಂಗ ಸ್ವಾಮೀಜಿ ಅವರ ಪಾದಪೂಜೆ ನೆರವೇರಿಸಲಾಯಿತು. ವನಕಲ್ಲು ಮಠದ ಪೀಠಾಧ್ಯಕ್ಷ ಬಸವರಮಾನಂದ ಸ್ವಾಮೀಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಶಸ್ತಿ ಪ್ರದಾನ: ಮಠದಿಂದ ನೀಡಲಾಗುವ 2021ನೇ ಸಾಲಿನ ‘ವನಕಲ್ಲು ಶ್ರೀ’ ಪ್ರಶಸ್ತಿಯನ್ನು ಸಂಶೋಧಕ ಡಾ.ಸಿ. ವೀರಣ್ಣ, ಬಸಪ್ಪ ರಾಜು ಅವರಿಗೆ ಪ್ರದಾನ ಮಾಡಲಾಯಿತು. ‘ಜಗಜ್ಯೋತಿ ಪ್ರಶಸ್ತಿ’ಯನ್ನು ಹೊಸದುರ್ಗದ ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ‘ವಿಶ್ವಜ್ಯೋತಿ ಪ್ರಶಸ್ತಿ’ಯನ್ನು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಹಾಗೂ ‘ಶ್ರೀ ಬಾಲಗಂಗಾಧರನಾಥ ನಿರ್ಮಲ ಜ್ಯೋತಿ ಪ್ರಶಸ್ತಿ’ಯನ್ನು ಚಲನಚಿತ್ರ ಕಲಾವಿದೆ ಅಭಿನಯ ಅವರಿಗೆ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT