ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಟಮುರಿ ಘಟನೆ: ವಿಚಾರಣೆಗೆ ವರ್ಷದ ಗಡುವು

Published 23 ಏಪ್ರಿಲ್ 2024, 16:07 IST
Last Updated 23 ಏಪ್ರಿಲ್ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ಹೈಕೋರ್ಟ್ ಒಂದು ವರ್ಷದ ಕಾಲಮಿತಿ‌ ನಿಗದಿಪಡಿಸಿದೆ.

ಈ ಸಂಬಂಧ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು.

‘ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಸಂಬಂಧಿಸಿದ ನ್ಯಾಯಾಲಯವು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಬೇಕು. ಈ ಆದೇಶವನ್ನು ಹೈಕೋರ್ಟ್ ರಿಜಿಸ್ಟ್ರಾರ್​ ವಿಚಾರಣಾ ನ್ಯಾಯಾಲಯದ ಗಮನಕ್ಕೆ ತರಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT