ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೊ ನಿಲ್ದಾಣಗಳ ನಡುವೆ ಅಕ್ಟೋಬರ್ 3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ‘ನಮ್ಮ ಮೆಟ್ರೊ’ ರೈಲು ಸಂಚಾರ ಇರುವುದಿಲ್ಲ.
ನಾಗಸಂದ್ರ ಮತ್ತು ಮಾದಾವರ ಮೆಟ್ರೊ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ‘ಶಾಸನಬದ್ಧ ಸುರಕ್ಷತಾ ತಪಾಸಣೆ’ ನಡೆಯುವುದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆ ತಿಳಿಸಿದೆ.
ಪೀಣ್ಯ ಕೈಗಾರಿಕೆ ಪ್ರದೇಶ ಮೆಟ್ರೊ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ನಿಲ್ದಾಣದವರೆಗೆ ನಮ್ಮ ಮೆಟ್ರೊ ಸಂಚಾರ ಎಂದಿನಂತೆ ಇರುತ್ತದೆ ಎಂದು ಹೇಳಿದೆ.