ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯವು ಬಂಧನ ವಾರಂಟ್ ಆದೇಶ ಹೊರಡಿಸಿದ್ದರಿಂದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಬಸವೇಶ್ವರನಗರ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಎದುರು ನಾಗರಾಜ್ ಅವರನ್ನು ಪೊಲೀಸರು ಹಾಜರು ಪಡಿಸಿದರು. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆ ಮಾಡಲಾಯಿತು.

ರಾಜಾಜಿನಗರದ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಮನೆ ಎದುರು 2021ರಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು. ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ 42ನೇ ಎಸಿಜೆಎಂ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಆಕ್ಷೇಪ: ಇಂಗ್ಲಿಷ್ನಲ್ಲಿ ಬಂಧನ ವಾರಂಟ್ ತಂದಿದ್ದಕ್ಕೆ ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದರು.

‘ಕನ್ನಡದಲ್ಲಿ ವಾರಂಟ್ ನೀಡಿದರೆ ಮಾತ್ರ ಬರುತ್ತೇನೆ. ಇಲ್ಲದಿದ್ದರೆ ಬರುವುದಿಲ್ಲ’ ಎಂದು ಪಟ್ಟು ಹಿಡಿದರು. ಪೊಲೀಸ್ ಜೀಪನ್ನು ಹತ್ತುವುದಕ್ಕೂ ನಿರಾಕರಿಸಿದ್ದರು. ಕೊನೆಗೆ ಆಟೊದಲ್ಲಿ ಬರುವುದಾಗಿ ಹೇಳಿದರು. ಅದಕ್ಕೆ ಪೊಲೀಸರು ಒಪ್ಪಿದರು. ಆಟೊದಲ್ಲಿ ನಾಗರಾಜ್ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಪೊಲೀಸ್ ವಾಹನವು ಆಟೊ ಹಿಂಬಾಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.