ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ವಾಟಾಳ್‌ ಸ್ಪರ್ಧೆ

Published 3 ಏಪ್ರಿಲ್ 2024, 15:55 IST
Last Updated 3 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಿಂದ ಆಯ್ಕೆಯಾದ ಸಂಸದರು ಕಾವೇರಿ, ಬೆಳಗಾವಿ, ಮಹಾದಾಯಿ, ಹಿಂದಿ ಹೇರಿಕೆಯ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಆದ್ದರಿಂದ, ಕನ್ನಡದ ಅಸ್ಮಿತೆಯನ್ನು ಸಂಸತ್ತಿನಲ್ಲಿ ಸಾರಲು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇದೇ 04ರಂದು (ಗುರುವಾರ) ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸುತ್ತೇನೆ’ ಎಂದು ಮಾಹಿತಿ ನೀಡಿದರು.

‘ಚುನಾವಣೆಗಳಲ್ಲಿ ಹಣವಂತರು, ಬಲಾಢ್ಯರು ಮಾತ್ರ ಸ್ಪರ್ಧಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚುನಾವಣಾ ವ್ಯವಸ್ಥೆಯನ್ನು ಸರಿಪಡಿಸಲು ಆಗಿಲ್ಲ’ ಎಂದು ದೂರಿದರು.

ಕನ್ನಡಪರ ಹೋರಾಟಗಾರ ಶಿವರಾಮೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT