ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಹಕ್ಕು ಬಲಪಡಿಸಬೇಕು, ನಗರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸುವ ಮೂಲಕ ದಿನಗೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು ಮತ್ತು ವರ್ಷಕ್ಕೆ ಕನಿಷ್ಠ 200 ದಿನ ಕೆಲಸ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಜನವಾದಿ ಮಹಿಳಾ ಸಂಘನೆಯ ನಾಯಕಿ ಕೆ.ಎಸ್. ವಿಮಲಾ ಮಾತನಾಡಿ, ‘ಗ್ರಾಮೀಣ ಕೃಷಿ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ. ಅತಿವೃಷ್ಟಿ, ಅನಾವೃಷ್ಟಿ, ವನ್ಯಜೀವಿಗಳ ಹಾವಳಿ, ಬೆಳೆ ಹಾನಿಯ ಜತೆಗೆ, ಬೆಂಬಲ ಬೆಲೆ ಇಲ್ಲದೆ ಇರುವುದು ಗ್ರಾಮೀಣ ಜನರ ಬದುಕನ್ನು ಅಸಹನೀಯಗೊಳಿಸಿದೆ. ಹಳ್ಳಿಗಳಲ್ಲಿ ಬದುಕು ನಡೆಸಲಾಗದ ದುಡಿಯುವ ವರ್ಗದ ಜನರು ದೊಡ್ಡ ಸಂಖ್ಯೆಯಲ್ಲಿ ನಗರಕ್ಕೆ ವಲಸೆ ಬರುತ್ತಿದ್ದಾರೆ. ಅವರಿಗೆ ನೆರವಾಗಲು ಮತ್ತು ನಗರ ಪ್ರದೇಶಗಳ ನಾಗರಿಕರಿಗೆ ಸೌಲಭ್ಯಗಳನ್ನು ಕಲ್ಪಿಸಲು ನೆರವಾಗುವಂತೆ ನಗರ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳು, ಬಾಲ್ಯ ವಿವಾಹ, ಮರ್ಯಾದೆಗೇಡು ಹತ್ಯೆಗಳು ಪ್ರತಿನಿತ್ಯ ವರದಿಯಾಗುತ್ತಿವೆ. ಮರ್ಯಾದೆಗೇಡು ಹತ್ಯೆ ನಿಯಂತ್ರಣಕ್ಕಾಗಿ ‘ಇವ ನಮ್ಮ ಇವ ನಮ್ಮವ’ ಹೆಸರಿನ ಕರಡು ಮಸೂದೆ ಸಿದ್ದವಾಗಿದ್ದು, ಬಜೆಟ್ ಅಧಿವೇಶನದಲ್ಲಿ ಮಂಡಿಸಬೇಕು. ಅಲ್ಲದೆ ಧರ್ಮಸ್ಥಳದ ಅತ್ಯಾಚಾರ, ಕೊಲೆ, ಅಸಹಜ ಸಾವು, ಭೂ ಕಬಳಿಕೆ, ಸ್ವ ಸಹಾಯ ಸಂಘಗಳ ಮೇಲಿನ ದೌರ್ಜನ್ಯ ಸೇರಿ ಎಲ್ಲ ಪ್ರಕರಣಗಳನ್ನು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮೀ ಮಾತನಾಡಿ, ಸ್ವ ಸಹಾಯ ಗುಂಪುಗಳಿಗೆ ಶೇಕಡ 4ರ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ನೀಡಬೇಕು. ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಜಾಮೀನು ರಹಿತವಾಗಿ ಕನಿಷ್ಠ ₹2 ಲಕ್ಷದವರೆಗೆ ಸಾಲ ಮಂಜೂರು ಮಾಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ಎನ್.ಮಹೇಶ್ ಬಾಬು ಅವರು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ರಾಜ್ಯ ಅಧ್ಯಕ್ಷೆ ಚಂದ್ರ ಕುಮಾರಿ, ಪ್ರಧಾನ ಕಾರ್ಯದರ್ಶಿ ದೇವಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.