ಬೆಂಗಳೂರು: ‘ವೇದ ವಿಜ್ಞಾನ ಮತ್ತು ಜಾಗತಿಕ ಸಮಕಾಲೀನ ಸವಾಲುಗಳು’ ಕುರಿತು ಜ.22ರಿಂದ 24ರವರೆಗೆ ಜಯನಗರದ ವಿಜಯ ಕಾಲೇಜಿನಲ್ಲಿ 7ನೇ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಲಿದೆ.

ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್ ಹಮ್ಮಿಕೊಂಡಿರುವ ಈ ಸಮ್ಮೇಳನವನ್ನು ಜ. 22ರಂದು ಬೆಳಿಗ್ಗೆ 10ಕ್ಕೆ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಉದ್ಘಾಟಿಸುವರು. ಪಾದರಾಜ ಮಠದ ಸುಜಯನಿಧಿ ತೀರ್ಥ ಸ್ವಾಮೀಜಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ವರಖೇಡಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಅಹಲ್ಯಾ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಬಿ.ರಮೇಶ್, ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯ ವಿ.ಆರ್. ಪಂಚಮುಖಿ, ವಿಜ್ಞಾನಿ ಪ್ರಹ್ಲಾದ ರಾಮರಾವ್, ವಿದ್ವಾಂಸರಾದ ಅರಳುಮಲ್ಲಿಗೆ ಪಾರ್ಥಸಾರಥಿ, ಎಚ್.ಬಿ. ಲಕ್ಷ್ಮೀನಾರಾಯಣ, ಟಿ.ಎ. ಬಾಲಕೃಷ್ಣ ಭಾಗವಹಿಸಲಿದ್ದಾರೆ. ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನದ ಅಭಿನವ ಶಂಕರ ಭಾರತಿ ಸ್ವಾಮೀಜಿ ಉಪನ್ಯಾಸ ನೀಡಲಿದ್ದಾರೆ.

ವಿವಿಧ ಗೋಷ್ಠಿಗಳು ನಡೆಯಲಿದ್ದು, ಜ.24ರಂದು ಸಂಜೆ 4ಕ್ಕೆ ಸಮಾರೋಪ ನಡೆಯಲಿದೆ. ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿ ಜಿ. ಶ್ರೀಧರ್, ಧಾರ್ಮಿಕ ದತ್ತಿ ಆಯುಕ್ತ ಬಿ. ಶರತ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ನಿವೃತ್ತ ಐಎಎಸ್ ಅಧಿಕಾರಿ ಎನ್. ಮಂಜುನಾಥ ಪ್ರಸಾದ್ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.