ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಯುವ ಘಟಕ ಆಗ್ರಹಿಸಿದೆ.

ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷರಾದ ವೆಂಕಟರೆಡ್ಡಿ ಡಿ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಮುದಾಯದಿಂದ 37 ಜನರು ಶಾಸಕರಾಗಿದ್ದಾರೆ. ಕಳೆದ ಸಚಿವ ಸಂಪುಟದಲ್ಲಿ 7 ಮಂದಿ ಸಚಿವರಾಗಿದ್ದು, ಗುಣಮಟ್ಟದ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಆ ಏಳು ಜನರನ್ನು ಸಂಪುಟದಲ್ಲಿ ಉಳಿಸಿಕೊಂಡು, ಇನ್ನಿಬ್ಬರಿಗೆ ಸಚಿವ ಸ್ಥಾನದ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

‘ನಮ್ಮ ಸಮುದಾಯದ ಯಾರಿಗೆ ಬೇಕಾದರೂ ಉಪಮುಖ್ಯಮಂತ್ರಿ ಸ್ಥಾನ ನೀಡಿದರೂ ಸ್ವಾಗತ. ಕಾಂಗ್ರೆಸ್ ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸಿರುವ, ಸಮುದಾಯದ ನಾಯಕರಾಗಿ ವೀರಶೈವ–ಲಿಂಗಾಯತ ಸಮಾಜವನ್ನು ಸಂಘಟಿಸಿರುವ ಈಶ್ವರ ಖಂಡ್ರೆ ಅವರಿಗೆ ನೀಡಿದರೆ ಹೆಚ್ಚು ಸಂತೋಷವಾಗಲಿದೆ’ ಎಂದು ಹೇಳಿದರು. ‘ವಿಧಾನ ಪರಿಷತ್ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಗಳಿಗೂ ನಮ್ಮ ಸಮುದಾಯದವರನ್ನು ನಾಮನಿರ್ದೇಶನ ಮಾಡಬೇಕು’ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮನೋಹರ್ ಅಬ್ಬಿಗೆರೆ, ಕೈಗಾರಿಕಾ ಮತ್ತು ವಾಣಿಜ್ಯ ಘಟಕದ ರಾಜ್ಯಾಧ್ಯಕ್ಷ ವಿಜಯ್ ಕುಮಾರ್ ಪಾಟೀಲ್, ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಅಣಬೇರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.