ಬೆಂಗಳೂರು: ‘ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ಪ್ರತಿಪಾದಿಸುತ್ತಾ ಬಂದಿದೆ. ಈಗಲೂ ಅದನ್ನೇ ನಾವು ಪ್ರತಿಪಾದಿಸುತ್ತೇವೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ’ ಎಂದು ತಿಳಿಸಿದರು.

'ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರ ಭಿನ್ನವಾದುದು. ಸಿಖ್, ಪಾರ್ಸಿ, ಜೈನರಿಗೆ ನೀಡಿರುವಂತೆ ಮಾನ್ಯತೆ ನೀಡಬೇಕು. ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರಣ, ಪಂಚಾಚಾರ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ’ ಎಂದರು.

‘ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ. ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂಬ ಜನಜನಿತ ಹೇಳಿಕೆ ಇದೆ. ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ’ ಎಂದರು.

‘ಪ್ರತ್ಯೇಕ ಧರ್ಮದ ವಿಚಾರಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ ಸಮುದಾಯದ ನಾಯಕರಾಗಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ಹೋಗಿ ಸ್ವತಂತ್ರ ಧರ್ಮದ ಮಾನ್ಯತೆ ಬೇಕು ಎಂದು ಕೇಳಿದರಷ್ಟೇ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.