ಬುಧವಾರ, ಮಾರ್ಚ್ 3, 2021
19 °C
ವಿಭೂತಿಪುರ ಮಠದ ಮಹಾಂತಲಿಂಗ ಶ್ರೀ ಬೇಸರ

ಧರ್ಮ ಬೋಧನೆಯಲ್ಲಿ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ವೀರಶೈವ ಲಿಂಗಾಯತ ಗುರುಗಳು ಸಮುದಾಯಕ್ಕೆ ಧರ್ಮ ಬೋಧನೆ ಮಾಡುವಲ್ಲಿ ವಿಫಲವಾಗಿದ್ದಾರೆ. ಇದರಿಂದ ಈಗಿನ ಯುವಜನಾಂಗಕ್ಕೆ ತಮ್ಮ ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಅರಿವು ಕಡಿಮೆ ಆಗುತ್ತಿದೆ’ ಎಂದು ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಅಖಿಲಭಾರತ ವೀರಶೈವ ಮಹಾಸಭಾ ವತಿಯಿಂದ ಭಾನುವಾರ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜಕೀಯ ನಾಯಕರು ವೀರಶೈವ-ಲಿಂಗಾಯತ ಸಮುದಾಯವನ್ನು ಇಬ್ಭಾಗ ಮಾಡಲು ಪ್ರಯತ್ನಿಸಿ ಕೈ ಸುಟ್ಟುಕೊಂಡರು. ಮಠಾ
ಧೀಶರು ಕಾರ್ಪೊರೇಟ್ ಸಂಸ್ಥೆಗಳ ರೀತಿ ಕಾಲೇಜುಗಳನ್ನು ನಿರ್ಮಿಸಿ ಸಿಇಒಗಳಾಗಿ ಬದಲಾಗಿದ್ದಾರೆ. ಇದರಿಂದ ಹೆಚ್ಚಿನ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ. ಆದರೆ, ತಮ್ಮ ಧರ್ಮದ ಬಗ್ಗೆ ಮಕ್ಕಳಲ್ಲಿ ಅರಿವಿನ ಮಟ್ಟ ಹೆಚ್ಚಿಸುವಲ್ಲಿ ವಿಫಲರಾಗಿದ್ದಾರೆ’ ಎಂದರು.

ಶಾಸಕ ಶಾಮನೂರು ಶಿವಶಂಕರಪ್ಪ, ‘ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಹೆಸರಿನಲ್ಲಿ ಅಲ್ಪ ಮೊತ್ತ ನೀಡಲಾಗುವುದು. ಆದರೆ, ಅದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಷ್ಟರಮಟ್ಟಿಗೆ ಸಹಕಾರಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಹಾಗೂ ಪೂರ್ಣ ಶುಲ್ಕ ಭರಿಸುವ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು