ಬುಧವಾರ, ಆಗಸ್ಟ್ 12, 2020
27 °C
ಕಬ್ಬನ್‌ ಉದ್ಯಾನ

ವಾಹನ ಸಂಚಾರ ನಿಷೇಧ: ಪಾಲಿಕೆ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಹನಗಳ ನಿಲುಗಡೆ ಹಾಗೂ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ತೋಟಗಾರಿಕೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಪಾಲಿಕೆ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್ ಅವರಿಗೆ ಕೌನ್ಸಿಲ್ ಸಭೆಯಲ್ಲಿ ಸೂಚಿಸಲಾಯಿತು.

ಉದ್ಯಾನದಲ್ಲಿ ವಾಹನ ಸಂಚಾರದಿಂದ ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ. ಲಾಲ್‍ಬಾಗ್ ಉದ್ಯಾನದ ಮಾದರಿಯಲ್ಲಿ ಕಬ್ಬನ್ ಉದ್ಯಾನದಲ್ಲೂ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ, ವಾಯುವಿಹಾರಿಗಳು, ಸೈಕಲ್ ಹಾಗೂ ವಿದ್ಯುತ್‍ಚಾಲಿತ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ. 

ಉದ್ಯಾನದಲ್ಲಿ ರಸ್ತೆಯುದ್ದಕ್ಕೂ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಇದರಿಂದ ಉದ್ಯಾನದಲ್ಲಿ ಆಗಾಗ ವಾಹನ ದಟ್ಟಣೆಯಾಗಿ ಸಂಚಾರಕ್ಕೂ ಅಡ್ಡಿಯಾಗಿತ್ತು. ಹೀಗಾಗಿ ಉದ್ಯಾನದಲ್ಲಿ ವಾಹನಗಳ ನಿಲುಗಡೆಗೂ ತಡೆ ನೀಡಲು ಪಾಲಿಕೆ ನಿರ್ಣಯಿಸಿದೆ.

'ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳಂದು ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸಂಪೂರ್ಣವಾಗಿ ವಾಹನ ನಿಷೇಧಿಸುವ ಇಲಾಖೆಯ ಉದ್ದೇಶಕ್ಕೆ ಈಗ ಪಾಲಿಕೆಯೂ ಬೆಂಬಲ ನೀಡಿರುವುದು ಸಂತಸ ತಂದಿದೆ. ವಾಹನಗಳನ್ನು ನಿಷೇಧಿಸುವುದರಿಂದ ಉದ್ಯಾನದ ಹಸಿರು ಸಿರಿಯ ಸಂರಕ್ಷಣೆಯಾಗಲಿದೆ' ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು