ಬೆಂಗಳೂರು: ‘ನಗರದ ಅಡಿಷನಲ್ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಕೋರ್ಟ್ ಹಿಂಭಾಗದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವಕೀಲರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು’ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆಯೋಜಿಸಿದ್ದ ಹಾಪ್ಕಾಮ್ಸ್ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಸಂಬಂಧ ವಕೀಲರ ನಿಯೋಗ ಬಂದರೆ ಅದನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ಮನವಿ ಈಡೇರಿಸಲು ವಿಶ್ವಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಸಲ್ಲಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಶಂಕರ ಬಿ. ಅಮರಣ್ಣವರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ, ಹಾಪ್ಕಾಮ್ಸ್ ಅಧ್ಯಕ್ಷ ಎ.ಎಸ್.ಚಂದ್ರೇಗೌಡ, ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಪ್ರಸಾದ್ ಇದ್ದರು.

ಹಾಪ್ಕಾಮ್ಸ್ನ ಈ ಮಳಿಗೆ ನಗರದಲ್ಲಿನ 286ನೇ ಮಳಿಗೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.