ಬುಧವಾರ, ಮೇ 25, 2022
24 °C

ಬೆಂಗಳೂರು: ವಾಹನ ಕದ್ದು, ಸಂಬಂಧಿಕರಿಗೆ ಉಡುಗೊರೆ ನೀಡುತ್ತಿದ್ದ ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಆರೋಪದಡಿ ಭರತ್ (32) ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ಭರತ್, ನಕಲಿ ಕೀ ಬಳಸಿ ಕೃತ್ಯ ಎಸಗುತ್ತಿದ್ದ. ಈತನಿಂದ ಸದ್ಯ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮನೆ ಮುಂದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ವಾಹನಗಳನ್ನು ಆರೋಪಿ ಗುರುತಿಸುತ್ತಿದ್ದ. ವಾಹನದ ನೋಂದಣಿ ಸಂಖ್ಯೆ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಇವೆಯಾ? ಎಂಬುದನ್ನು ಆನ್‌ಲೈನ್‌ ಮೂಲಕ ಪರೀಕ್ಷಿಸುತ್ತಿದ್ದ. ದಂಡವಿಲ್ಲದ ವಾಹನಗಳನ್ನು ಮಾತ್ರ ಕಳ್ಳತನ ಮಾಡುತ್ತಿದ್ದ. ಕದ್ದ ವಾಹನಗಳನ್ನು ಆರೋಪಿ, ಮಾರಾಟ ಮಾಡುತ್ತಿರಲಿಲ್ಲ. ಮಾರಿದರೆ, ಪೊಲೀಸರಿಗೆ ಸಿಗಬಹುದೆಂದು ಅಂದುಕೊಂಡಿದ್ದ. ಅದರ ಬದಲಿಗೆ, ತಮ್ಮ ಸಂಬಂಧಿಕರಿಗೆ ವಾಹನವನ್ನು ಉಡುಗೊರೆ ನೀಡುತ್ತಿದ್ದ‘ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು