ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: 6 ವಾಹನ ಕದ್ದಿದ್ದವನ ಬಂಧನ

Last Updated 7 ಅಕ್ಟೋಬರ್ 2021, 17:04 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪದಡಿ ತೌಸಿಫ್ ಎಂಬಾತನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ತೌಸಿಫ್, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 2 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ತರಕಾರಿ ತರಲು ಮಾರುಕಟ್ಟೆಗೆ ಹೋಗಿದ್ದರು. ದ್ವಿಚಕ್ರ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಇದೇ ಸಂದರ್ಭದಲ್ಲೇ ಆರೋಪಿ, ದ್ವಿಚಕ್ರ ವಾಹನ ಕದ್ದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು’ ಎಂದೂ ತಿಳಿಸಿದರು.

‘ಪದೇ ಪದೇ ಅಪರಾಧ ಎಸಗುತ್ತಿದ್ದ ತೌಸಿಫ್, ದ್ವಿಚಕ್ರ ವಾಹನಗಳನ್ನು ಕದ್ದು ಬಳಸುತ್ತಿದ್ದ. ಕೆಲ ವಾಹನಗಳನ್ನು ಮಾರಾಟ ಮಾಡಿ ಹಣ ಪಡೆದಿದ್ದ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT