ಗುರುವಾರ , ಆಗಸ್ಟ್ 22, 2019
21 °C

ಮೂವರಿಗೆ ವೇಮಗಲ್‌ ಸಂಸ್ಕೃತಿ ಸಿರಿ ಪ್ರಶಸ್ತಿ

Published:
Updated:
Prajavani

ಬೆಂಗಳೂರು: ಡಾ.ವೇಮಗಲ್‌ ನಾರಾಯಣಸ್ವಾಮಿ ಪ್ರತಿಷ್ಠಾನ ನೀಡುವ 2019ನೇ ಸಾಲಿನ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಹಿರಿಯ ಸಾಹಿತಿ ಎಚ್‌.ಎಸ್‌.ವೆಂಕಟೇಶಮೂರ್ತಿ, ಶ್ರೀಕೃಷ್ಣ ಪಾರಿಜಾತ ಕಲಾವಿದೆ ಮಲ್ಲವ್ವ ಮ್ಯಾಗೇರಿ ಹಾಗೂ ಸುಗಮ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ತಲಾ ₹ 25 ಸಾವಿರ ನಗದು ಒಳಗೊಂಡಿದೆ. ಇದೇ 18ರಂದು ಸಂಜೆ 6ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಹಿ.ಚಿ.ಬೋರಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Post Comments (+)