ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಪುರ: ವಿಜೃಂಭಣೆಯ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ

Published 24 ಮಾರ್ಚ್ 2024, 16:10 IST
Last Updated 24 ಮಾರ್ಚ್ 2024, 16:10 IST
ಅಕ್ಷರ ಗಾತ್ರ

ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ವೆಂಕಟೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಹಾಗೂ ದ್ರೌಪದಮ್ಮ ಧರ್ಮರಾಯಸ್ವಾಮಿ ಕರಗಶಕ್ತೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವದ ಅಂಗವಾಗಿ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ದ್ರೌಪದಮ್ಮ ಧರ್ಮರಾಯ ಸ್ವಾಮಿ, ಮಾರಮ್ಮ, ಮುನೇಶ್ವರ ದೇವಾಲಯ ಯಲ್ಲಮ್ಮ, ಆಂಜನೇಯ ಸ್ವಾಮಿ ಸೇರಿದಂತೆ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ, ಪೂಜಾ ಕೈಂಕರ್ಯಗಳು ನಡೆದವು.

ಗ್ರಾಮದ ಮುಖಂಡರು ಹಾಗೂ ಸಾವಿರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವರಿಗೆ ಪೂಜೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥ ಎಳೆಯುವ ಮೂಲಕ ದೇವರ ಸೇವೆಯಲ್ಲಿ ಪಾತ್ರರಾದರು.

ವರ್ತೂರು ಮಾರತ್ತಹಳ್ಳಿ ಮುಖ್ಯರಸ್ತೆ ಹಾಗೂ ರಾಮಗೊಂಡನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ, ಪೂಜಾಕುಣಿತ, ನಾದಸ್ವರ, ವೀರಗಾಸೆ, ಗಾರುಡಿಗೊಂಬೆ, ಡೊಳ್ಳು ಕುಣಿತದೊಂದಿಗೆ ಬ್ರಹ್ಮರಥೋತ್ಸವ ಸಾಗಿತು.

ರಥೋತ್ಸವಕ್ಕೆ ರಾಮಗೊಂಡನಹಳ್ಳಿ, ಸಿದ್ದಾಪುರ, ನಲ್ಲೂರಹಳ್ಳಿ, ವೈಟ್‌ಫೀಲ್ಡ್, ವರ್ತೂರು, ವರ್ತೂರು ಕೋಡಿ, ಮಧುರನಗರ, ಗುಂಜೂರು, ಸೊರುಹುಣಸೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಬಡಾವಣೆಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಪಾನಕ ಮಜ್ಜಿಗೆ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT