ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಣುಗೋಪಾಲಸ್ವಾಮಿ ರಥೋತ್ಸವ ಸಂಭ್ರಮ

ಸಂಚಾರ ಬಂದ್‌: ಚಾಲಕರ ಪರದಾಟ
Last Updated 31 ಮಾರ್ಚ್ 2023, 20:19 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಸ್ತೆಯ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಅಂಗವಾಗಿ ಶುಕ್ರವಾರ ಶ್ರೀರಾಮ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವವು ಸಂಭ್ರಮದಿಂದ ನೆರವೇರಿತು.

ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಕಣ್ತುಂಬಿಕೊಂಡರು. ಕಲಾ ತಂಡಗಳು ಜಾತ್ರೆಯ ಮೆರುಗು ಹೆಚ್ಚಿಸಿ
ದ್ದವು. ಬ್ಯಾಟರಾಯನಪುರದ ಸುತ್ತಮುತ್ತಲ ಬಡಾವಣೆಯ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಗುರುವಾರವೂ
ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದ್ದವು. ಜಾತ್ರೆ ಅಂಗವಾಗಿ ಪಾನಕ, ಮಜ್ಜಿಗೆ ವಿತರಣೆ ಮಾಡಲಾಯಿತು.

ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ವಾಹನ ಸವಾರರು ನಗರದ ಒಳಕ್ಕೆ ಬರಲು ಪರದಾಡಿದರು.

ಶುಕ್ರವಾರ ಬೆಳಿಗ್ಗೆ 8ರಿಂದಲೇ ಮೈಸೂರು ರಸ್ತೆಯ ಮೂಲಕ ನಗರದ ಒಳ ಹಾಗೂ ಹೊರಹೋಗುವ ವಾಹನ
ಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಈ ಮಾರ್ಗಗಳು ಕಿರಿದಾಗಿದ್ದರಿಂದ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೇ ಚಾಲಕರು ಪರದಾಡಿದರು. ಕೆಲವು ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಕೆಎಸ್‌
ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳೂ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದವು.

ದೀಪಾಂಜಲಿನಗರ, ಕೆಂಗೇರಿ, ನಾಯಂಡಹಳ್ಳಿ, ಬಾಪೂಜಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಜನರು ಮೆಜೆಸ್ಟಿಕ್‌ ಬಳಿಗೆ ಬರಲು ಪರ್ಯಾಯ ಮಾರ್ಗ ಬಳಸಿದರು. ಶಾರದಪೀಠದ ಶೃಂಗೇರಿ ಶಂಕರಮಠ ಶಾರದಾರಥೋತ್ಸವವು ಶುಕ್ರವಾರ ಸಂಭ್ರಮ
ದಿಂದ ನೆರವೇರಿತು. ಸುತ್ತಮುತ್ತಲ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT