ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ- ಮತದಾರರ ಪಟ್ಟಿ ಪರಿಶೀಲನೆ: ವಿಶೇಷ ಅಧಿಕಾರಿಗಳ ನೇಮಕ

Last Updated 29 ನವೆಂಬರ್ 2022, 15:46 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ 100ರಷ್ಟು ಪರಿಶೀಲನೆ ಮಾಡಲು ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ.

162- ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, 169- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಾ. ಆರ್. ವಿಶಾಲ್ ಹಾಗೂ 174-ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ವಿಶೇಷ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 2022ರ ಜ.1ರಿಂದ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ತೆಗೆದುಹಾಕಿರುವ ಎಲ್ಲಾ ವಿವರಗಳನ್ನು ವಿಶೇಷ ಅಧಿಕಾರಿಗಳು ಪರಿಶೀಲಿಸುತ್ತಾರೆ.

ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಡಿ.9ರಿಂದ ಡಿ.24ರವರೆಗೆ ವಿಸ್ತರಿಸಲಾಗಿದೆ. ಈ ಮೂರುಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೇರ್ಪಡೆ ಮತ್ತು ತೆಗೆದುಹಾಕಿರುವ ವಿವರಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒದಗಿಸಲು ನಿರ್ದೇಶನ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಎಇಆರ್‌ಒ ನೇಮಕ: 27 ಕ್ಷೇತ್ರಗಳಿಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಿ ಕೇಂದ್ರ ಚುನಾವಣೆ ಆಯೋಗ ಮಂಗಳವಾರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT