ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂ.3ಕ್ಕೆ ಮತದಾನ: ಪದವೀಧರ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರದ ಪರಿಶೀಲನೆ

Published 2 ಜೂನ್ 2024, 14:22 IST
Last Updated 2 ಜೂನ್ 2024, 14:22 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸರ್ಕಾರಿ ಕಲಾ ಕಾಲೇಜಿನಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸಹಿತ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲಾದ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು.

ಬಿಬಿಎಂಪಿ‌ ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳಿದ್ದು, ಜೂನ್‌ 3ರಂದು ಬೆಳಿಗ್ಗೆ 7ಕ್ಕೆ ಅಣಕು ಮತದಾನ ನಡೆಯಲಿದೆ. ಬೆಳಿಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. 

ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಹೆಚ್ಚುವರಿ ಚುನಾವಣಾಧಿಕಾರಿಗಳಾದ ಕೆ. ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT