ಶನಿವಾರ, ಜನವರಿ 22, 2022
16 °C

ವೇತನ ಬಾಕಿ; ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಅಕ್ಟೋಬರ್‌ ವೇತನ ಪಾವತಿ ಮಾಡಿಲ್ಲ’ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಆಲ್‌ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)’ ನೇತೃತ್ವದಲ್ಲಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆಸ್ಪತ್ರೆಯ ಸ್ವಚ್ಛತೆ ಕಾರ್ಮಿಕರು, ಕೊಠಡಿ ಸಹಾಯಕರು, ಲಿಫ್ಟ್‌ ನಿರ್ವಹಣೆಗಾರು, ಡಾಟಾ ಎಂಟ್ರಿ ಆಪರೇಟರ್ಸ್‌ಗಳು ಹಾಗೂ ಭದ್ರತಾ ಸಿಬ್ಬಂದಿ ಪ್ರತಿಭಟನೆಯಲ್ಲಿದ್ದರು.

‘ಚಾಲ್ತಿಯಲ್ಲಿರುವ ಕಾನೂನಿನ್ವಯ ಪ್ರತಿ ತಿಂಗಳು 7ರೊಳಗೆ ಕಾರ್ಮಿಕರಿಗೆ ವೇತನ ಪಾವತಿ ಮಾಡಬೇಕು. ಆದರೆ, ಅಕ್ಟೋಬರ್ ಮುಗಿದು ನವೆಂಬರ್‌ ಆರಂಭವಾದರೂ ವೇತನ ನೀಡಿಲ್ಲ. ಈ ಬಗ್ಗೆ ವಿಚಾರಿಸಿದಾಗ, ಆಡಳಿತ ಮಂಡಳಿಯವರಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.

‘ವೇತನವನ್ನೇ ನಂಬಿಕೊಂಡು ಸಿಬ್ಬಂದಿ ಜೀವನ ಸಾಗಿಸುತ್ತಿದ್ದಾರೆ. ವೇತನ ಬಾರದಿದ್ದರಿಂದ ಸಿಬ್ಬಂದಿ, ಮನೆ ಬಾಡಿಗೆ ಪಾವತಿ ಮಾಡಲಾಗದೇ ಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು, ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಾಕಿ ವೇತನವನ್ನು ಕೂಡಲೇ ಪಾವತಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು