ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕ್ಟೋರಿಯಾ: ನೌಕರರ ಮರು ನೇಮಕ

Published 14 ಮೇ 2024, 23:30 IST
Last Updated 14 ಮೇ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೈಬಿಡಲಾಗಿದ್ದ ಗ್ರೂಪ್ ‘ಡಿ’ನ 55 ನೌಕರರನ್ನು ಮರು ನೇಮಕ ಮಾಡಿಕೊಂಡು, ಎರಡು ತಿಂಗಳ ವೇತನ ನೀಡುವುದಾಗಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) ತಿಳಿಸಿದೆ.

ಈ ಹಿಂದೆ ಸ್ವಿಸ್ ಏಜೆನ್ಸಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು, ಹೊಸದಾಗಿ ಗುತ್ತಿಗೆ ಪಡೆದಿದ್ದ ಸ್ಫೂರ್ತಿ ಏಜೆನ್ಸಿ ಕೆಲಸದಿಂದ ತೆಗೆದು ಹಾಕಿತ್ತು. ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಎಲ್ಲ 55 ಮಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಈ ಬಗ್ಗೆ ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚನೆಯಾದ ಸಮಿತಿಯು, ಎರಡೂ ಏಜೆನ್ಸಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಕೈಬಿಡಲಾಗಿದ್ದ 55 ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದೆ. ‌

ಕಳೆದ 10-15 ವರ್ಷಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಸಿಬ್ಬಂದಿ ಹೊಂದಿದ್ದಾರೆ. ಹಾಗಾಗಿ, ಅನುಭವ ಮತ್ತು ಮಾನವೀಯತೆ ಆಧಾರದ ಮೇಲೆ ಅವರನ್ನು ತಕ್ಷಣವೇ ನೇಮಕ ಮಾಡಿಕೊಳ್ಳುವಂತೆ ಹಾಗೂ ಹೊಸದಾಗಿ ನೇಮಕ ಮಾಡಿಕೊಂಡಿರುವವರನ್ನು ಬೇರೆ ಕಡೆಗೆ ನಿಯೋಜಿಸುವಂತೆ ಏಜೆನ್ಸಿ ಮುಖ್ಯಸ್ಥರಿಗೆ ಸಮಿತಿ ತಿಳಿಸಿದೆ.

‘ಕೆಲಸದಿಂದ ಕೈಬಿಡಲಾಗಿದ್ದ ಎಲ್ಲ 55 ಮಂದಿ ಹಲವು ವರ್ಷಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಅನುಭವ ಹೊಂದಿದ್ದರು. ಹಾಗಾಗಿ, ಅವರನ್ನೇ ನೇಮಿಸಿಕೊಳ್ಳುವಂತೆ ಹೊಸ ಏಜೆನ್ಸಿಗೆ ತಿಳಿಸಲಾಗಿದೆ. ಜೊತೆಗೆ ಸಿಬ್ಬಂದಿಗೆ ಕಳೆದ ಎರಡು ತಿಂಗಳ ವೇತನ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗುವುದು’ ಎಂದು ಬಿಎಂಸಿಆರ್‌ಐ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT